ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂಥೆ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್‍ಐಟಿ ಮುಂದೆ ಬಂದು ದೈರ್ಯವಾಗಿ ಮುಂದೆ ಬಂದು ದೂರು ನೀಡುವಂಥೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಅವರು ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಅಧಿಕಾರಿಗಳು ಅವರ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಅಧಿಕಾರಿಗಳಿಗೆ ಅವರು ಸಹಕಾರ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಸಹಜವಾಗಿಯೇ ಅವರು ತನಿಖೆಗೆ ಸಹಕಾರ ಕೊಡಬೇಕು ಅಂಥ ಹೇಳಿದರು. ಇನ್ನೂ ಅವರ ರಾಜತಾಂತ್ರಿಕ ಪಾಸ್‍ಪೋರ್ಟ್ ರದ್ದಾಗುತ್ತೆ. ಅದೆಲ್ಲಾ ತಿಳಿದುಕೊಂಡು ಅವರೇ ಮರಳಿ ಬಂದಿರಬಹುದು ಎಂದು ಅವರು ಹೇಳಿದ್ದಾರೆ.