ನವದೆಹಲಿ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯ (ಎಂಇಎ) ನೀಡಿರುವ ಶೋಕಾಸ್ ನೋಟಿಸ್ಗೆ ಉತ್ತರಿಸಲು ಜೂನ್ 2 ರವರೆಗೆ ಸಮಯವಿದೆ.
ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೋರಿರುವಂತೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ಏಕೆ ರದ್ದುಗೊಳಿಸಬಾರದು ಎಂದು ಎಂಇಎ ಮೇ 23 ರಂದು ಶೋಕಾಸ್ ನೋಟಿಸ್ ನೀಡಿತ್ತು.
“ನಾವು ಮೇ 21 ರಂದು ಕರ್ನಾಟಕ ಸರ್ಕಾರದಿಂದ ವಿನಂತಿಯನ್ನು ಸ್ವೀಕರಿಸಿದ್ದೇವೆ. ಭಾರತೀಯ ಪಾಸ್ಪೋರ್ಟ್ ಕಾಯ್ದೆಯ ಪ್ರಕಾರ ಮೇ 23ರಂದು ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.