ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ 42ನೇ ಎಸಿ ಎಂ ಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು ಅವರ ಅರ್ಜಿ ವಿಚಾರಣೆ ನಡೆಯಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಯಲಿದೆ.
ಈಗಾಗಲೇ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನ ಕರೆದು ತಂದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಯಲಿದೆ ಮಧ್ಯಾಹ್ನ 3 ಗಂಟೆಗೆ ನ್ಯಾಯಾಧೀಶರು ಅರ್ಜಿ ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಅವರು ವಾದಿಸಲಿದ್ದು ಎಸ್ಐಡಿ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಲಿದ್ದಾರೆ. ಬೆಂಗಳೂರಿನ 42ನೇ ಎಸಿಎಂ ಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.ಆರೋಪಿ ಪ್ರಜ್ವಲ್ ಅನ್ನು ಸಿಐಟಿ ಕಸ್ಟಡಿಗೆ ಕೇಳಲಿದೆ ಎಂದು ಹೇಳಲಾಗುತ್ತಿದೆ.
.