ಬೆಂಗಳೂರು : ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖೆಯನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದ್ದಾರೆ.
ಇಲಾಖೆಗೆ ವಹಿಸಿದ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಗ್ರಾಮೀಣ ಅಭಿವೃದ್ಧಿ ಇಲಾಖೆ ಎಸಿ ಎಸಿಗೆ ಪ್ರಿಯಾಂಕ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಹಿನ್ನೆಲೆ?
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಲ್ಲದೆ ಇವರ ಇಬ್ಬರು ಸಹೋದರರು ಹಣಕಾಸು ವಿಚಾರವಾಗಿ ಮೋಸಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಕೆಆರ್ಐಡಿಎಲ್ ದೊಡ್ಡ ಮೊತ್ತದ ಪರಿಹಾರ ನೀಡಬೇಕೆಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ.