ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿನ್ನೆ ಮಧ್ಯರಾತ್ರಿ ಬಂಧಿಸಿದ್ದರು. ಇಂತಹ ಅವರನ್ನು ಇಂದು ಕೋರ್ಟ್ ಗೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಎರ್ ಪೋರ್ಟ್ ಗೆ 1.40ರ ಸುಮಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಚ್ ನಿಂದ ಆಗಮಿಸಿದ್ದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ತಡರಾತ್ರಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.
ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆ ಪ್ರಕ್ರಿಯೆ ನಂತ್ರ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಈ ಕೇಸ್ ಸಂಬಂಧ ವಿಚಾರಣೆ ನಡೆಸಲಿರುವಂತ ನ್ಯಾಯಾಲಯದ ಮುಂದೆ 15 ದಿನಗಳ ಕಾಲ ವಿಚಾರಣೆ ನಡೆಸೋದಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್ ಈಶ್ವರಪ್ಪ ಸವಾಲು