ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ವೆಗಾ ಸಿಟಿ ಮಾಲ್ ನಿಂದ ಜಿಗಿದು ಯುವಕ ಒಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನಲ್ಲಿ ವೆಗಾ ಸಿಟಿ ಮಾಲ್ ನಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ವೆಗಾ ಸಿಟಿ ಮಾಲ್ ನಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ಯುವಕನ ಗುರುತು ಪತ್ತೆಗಾಗಿ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ