ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶೇಷ ತನಿಕಾ ತಂಡ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಐವರು ಹಿರಿಯ ಪೊಲೀಸ್ ಅಧಿಕಾರಿಗಳ ಎಸ್ಐಟಿ ತಂಡ ರಚನೆ ಮಾಡಲಾಗಿದ್ದು, ಎಸ್ಐಟಿ ಮೂಲಕ ತನಿಖೆ ಮಾಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
SIT ವರದಿಯನ್ನು ಆಧರಿಸಿ ಸಚಿವ ಬಿ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ ಐ ಟಿ ವರದಿ ಬರುವವರೆಗೆ ಕಾದು ನೋಡಲು ಸರ್ಕಾರ ತೀರ್ಮಾನ ಮಾಡಿದೆ. ಅಂತರಾಜ್ಯಕ್ಕೆ ಹಣ ವರ್ಗಾವಣೆ ಆಗಿದ್ದರೆ ಸಿಬಿಐ ತನಿಖೆ ಅನಿವಾರ್ಯ ಅಂತಹ ಪ್ರಕರಣಗಳಲ್ಲಿ ಎಸ್ಐಟಿ ತನಿಖೆ ಮಾಡಲು ಆಗುವುದಿಲ್ಲ. ಆಗ ಅನಿವಾರ್ಯವಾಗಿ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡಬೇಕಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ಪ್ರಕರಣವನ್ನು ಸಿಐಡಿಗೂ ರಾಜ್ಯ ಸರ್ಕಾರ ಹಸ್ತಾಂತರಿಸಿತ್ತು. ಬಳಿಕ ಸಿಐಡಿ ಅಧಿಕಾರಿಗಳು ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಅವರ ಪತ್ನಿಯಿಂದ ಮಾಹಿತಿ ಪಡೆದುಕೊಂಡರು ಇದೀಗ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ಅದರ ಮೂಲಕ ಮಾಹಿತಿ ಪಡೆದುಕೊಳ್ಳಲು ನಿರ್ಧಾರ ಮಾಡಿದೆ ಎಂದು ಹೇಳಲಾಗುತ್ತಿದೆ.