ಬೆಂಗಳೂರು : ಕಳೆದ ಕೆಲವು ದಿನಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನದ ಕುರಿತಂತೆ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಆರ್ ವಿ ದೇಶಪಾಂಡೆ ಪ್ರತಿಕ್ರಿಯ ನೀಡಿದ್ದು ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆಯಾಗಿಲ್ಲ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿದರು.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರಿದೆ ಅನ್ನೋದು ಗಾಳಿ ಸುದ್ದಿ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ಹೌದು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವು ಹಿರಿಯ ನಾಯಕರ ಹೆಸರು ಕೇಳಿ ಬರುತ್ತಿದೆ.ಅಧ್ಯಕ್ಷ ಸ್ಥಾನ ಬದಲಾಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.ಆದರೆ ಇದೀಗ ಆರ್ ವಿ ದೇಶಪಾಂಡೆ ಅವರು ಇದೆಲ್ಲ ಗಾಳಿ ಸುದ್ದಿ, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರೇ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.