ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಶುರುವಾಗಿದೆ. ರಾಜ್ಯ ಸರ್ಕಾರದಿಂದ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿ ಸಂಬಂಧ, ಹೆಚ್.ಡಿ ರೇವಣ್ಣಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಆರೋಪಿಯಾದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸಲು ಕೋರಿ ಪ್ರಶ್ನಿಸಿ ರಾಜ್ಯ ಸರ್ಕಾರ (ಎಸ್ ಐ ಟಿ) ಸಲ್ಲಿಸಿದ್ದ ಅರ್ಜಿ ಸಂಬಂಧ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ ಐ ಆರ್ ರದ್ದುಪಡಿಸುವಂತೆ ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಸರ್ಕಾರಕ್ಕೆ ( ಎಸ್ ಐ ಟಿ )ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮತ್ತೊಂದೆಡೆ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ತಕರಾರು ಅರ್ಜಿ ಸಲ್ಲಿಸಿದ್ದ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್ ಈಶ್ವರಪ್ಪ ಸವಾಲು
ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ