ಶಿವಮೊಗ್ಗ: ಅಪಘಾತವಾಗಿದ್ರೇ ನಾಮುಂದು, ತಾಮುಂದು ಅಂತ ನೋಡಿ, ಅಯ್ಯೋ ಅಂತ ಮರುಗೋರೋ ಹೆಚ್ಚು. ಇನ್ನೂ ಕೆಲವರು ಮೊಬೈಲ್ ಕ್ಯಾಮರಾ ಆನ್ ಮಾಡಿ, ವೀಡಿಯೋ ಮಾಡಿಕೊಳ್ಳುದು ಹುಚ್ಚು. ಇದರ ನಡುವೆ ಅಪಘಾತದಂತ ಸಂದರ್ಭದಲ್ಲಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿದ್ರೆ ಅಮೂಲ್ಯ ಜೀವ ಉಳಿಸಬಹುದು ಎಂಬ ಧ್ಯೇಯ ಹೊಂದಿರೋ, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತ್ರ, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಸಿಗಂದೂರು ದೇವಸ್ಥಾನಕ್ಕೆ ತೆರಳುತ್ತಿದ್ದ ದಂಪತಿಗಳಿಗೆ ಅಪಘಾತದಲ್ಲಿ ಗಾಯ
ಸಿಗಂದೂರು ದೇವಸ್ಥಾನಕ್ಕೆ ಬೈಕ್ ನಲ್ಲಿ ದಂಪತಿಗಳಿಬ್ಬರು ತೆರಳುತ್ತಿದ್ದರು. ಈ ವೇಳೆ ಸಾಗರ-ಆನಂದಪುರ ಮಾರ್ಗ ಮಧ್ಯದ ಹೊಸಗುಂದ ರಸ್ತೆಯ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ದಂಪತಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ ನಿಲ್ಲಿಸಿ ಅಪಘಾತದಲ್ಲಿ ಗಾಯಗೊಂಡವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ನೆರವು
ಇದೇ ಮಾರ್ಗದಲ್ಲಿ ಸಾಗುತ್ತಿದ್ದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಪಘಾತದ ಘಟನಾ ಸ್ಥಳಕ್ಕೆ ತೆರಳಿ, ದಂಪತಿಗಳನ್ನು ತುರ್ತು ಚಿಕಿತ್ಸೆಗಾಗಿ ತಮ್ಮ ಬೆಂಗಾವಲು ವಾಹದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಚಿಕಿತ್ಸೆಯ ವ್ಯವಸ್ಥೆ ಮಾಡಿದ್ದಾರೆ.
ಸೂಕ್ತ ಕಾಲದಲ್ಲಿ ಚಿಕಿತ್ಸೆ, ಪ್ರಾಣಾಪಾಯದಿಂದ ಪಾರಾದ ದಂಪತಿಗಳು
ಆನಂದಪುರ ಮಾರ್ಗ ಮಧ್ಯದ ಹೊಸಗುಂದ ಕ್ರಾಸ್ ಬಳಿಯಲ್ಲಿ ಬೈಕ್ ಅಪಘಾತಕ್ಕೆ ಒಳಗಾಗಿ ರಸ್ತೆ ಮಧ್ಯದಲ್ಲೇ ಬಿದ್ದಿದ್ದಂತ ದಂಪತಿಗಳನ್ನು ಸೂಕ್ತ ಕಾಲದಲ್ಲಿ ಚಿಕಿತ್ಸೆ ಕೊಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ದಂಪತಿಗಳು ಶಾಸಕರಿಗೆ ಕೃತಜ್ಞತೆಗಳನ್ನು ಕೂಡ ಸಲ್ಲಿಸಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ
ಇದೀಗ ಶಾಸಕ ಬೇಳೂರು ಗೋಪಾಲಕೃಷ್ಣ, ಅಪಘಾತದಲ್ಲಿ ಗಾಯಗೊಂಡಿದ್ದಂತ ದಂಪತಿಗಳನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ವೀಡಿಯೋ, ಪೋಟೋ ವೈರಲ್ ಆಗಿದ್ದಾವೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶಾಸಕರಂದ್ರೆ ಹೀಗೆ ಇರಬೇಕು ಅನ್ನೋ ಮಾತನ್ನೂ ವ್ಯಕ್ತ ಪಡಿಸಿದ್ದಾರೆ.
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೀಗೆ ಮಾಡಿದ್ದು ಮೊದಲೇನಲ್ಲ
ಈ ಹಿಂದೆ ಶಾಸಕರಾಗೋ ಮೊದಲಿನಿಂದಲೂ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು, ಅನಾರೋಗ್ಯಕ್ಕೆ ಒಳಗಾಗಿ ಸೂಕ್ತ ಚಿಕಿತ್ಸೆ ನಿರೀಕ್ಷೆಯಲ್ಲಿದ್ದವರಿಗೆ ನೆರವಾಗಿದ್ದರು. ರಸ್ತೆಯಲ್ಲಿ ಮರ ಬಿದ್ದು ಸಂಚಾರಕ್ಕೆ ತೊಂದ್ರೆಯಾದಗೂ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸೇರಿ ತೆರವುಗೊಳಿಸೋ ಕಾರ್ಯವನ್ನು ಮಾಡಿದ್ದರು. ಈಗ ಅಪಘಾತದಲ್ಲಿ ಗಾಯಗೊಂಡಿದ್ದಂತ ದಂಪತಿಗಳನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ, ಸೂಕ್ತ ಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್ ಈಶ್ವರಪ್ಪ ಸವಾಲು
ಶಿವಮೊಗ್ಗ: ಜೂ.1ರ ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ