Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕನ್ನಡಡಿಗರ ತೆರಿಗೆ’ಯಲ್ಲಿ ಕೇರಳಿಗರನ್ನು ಸಾಕುತ್ತಿದೆ ಎಂದ ‘ಪ್ರಹ್ಲಾದ್ ಜೋಶಿ’ಗೆ ತಿರುಗೇಟು ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’
KARNATAKA

‘ಕನ್ನಡಡಿಗರ ತೆರಿಗೆ’ಯಲ್ಲಿ ಕೇರಳಿಗರನ್ನು ಸಾಕುತ್ತಿದೆ ಎಂದ ‘ಪ್ರಹ್ಲಾದ್ ಜೋಶಿ’ಗೆ ತಿರುಗೇಟು ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಿದ್ದರಾಮಯ್ಯ ಸಾಕುತ್ತಿದ್ದಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏನು ಹೇಳಿದ್ರು ಅಂತ ಮುಂದೆ ಓದಿ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿರುವಂತ ಅವರು, ಕೇಂದ್ರ ಸರ್ಕಾರದಲ್ಲಿಯೇ ಇದ್ದು, ಪ್ರಧಾನ‌ ಮಂತ್ರಿ ಮೋದಿಯವರ ನೀತಿ‌ ನಿಯಮಗಳ ಬಗ್ಗೆಯೇ ಅರಿವಿಲ್ಲದೆ ಮಾತನಾಡುತ್ತಿರುವ ಪ್ರಹ್ಲಾದ್ ಜೋಷಿ ಅವರೇ, ರಾಜ್ಯದ ವಿರೋಧ ಪಕ್ಷದ ನಾಯಕರಾದ ಅಶೋಕ್,‌ಬಿ.ಜೆ.ಪಿ ಯ ರಾಜ್ಯಧ್ಯಕ್ಷಾದ ವಿಜಯೇಂದ್ರ ಅವರುಗಳೇ ನಿಜಕ್ಕೂ ನೀವುಗಳು ತಮ್ಮ ಬುದ್ಧಿವಂತಿಕೆಯನ್ನು ಅಡವಿಟ್ಟಿರುವ ಹಾಗೆ ಕಾಣಿಸುತ್ತಿರುವುದು ಸಾಬೀತಾಗಿದೆ‌. ಯಾವುದೇ ಒಂದು ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನೇ ಪಡೆಯದೆ, ಟ್ವೀಟ್ ಮಾಡುತ್ತೀರೋ ನೀವುಗಳು ಜನರ ಮುಂದೆ ತಮಗೆ ಅರಿವಿಲ್ಲ ಎಂಬುದನ್ನು ಪದೇ ಪದೇ ತೋರಿಸಿಕೊಳ್ಳುವ ಖಯಾಲಿಗೆ ಬಿದ್ದಂತಿದೆ ಎಂದಿದ್ದಾರೆ.

ನಾವು ಸಾರ್ವಜನಿಕರಿಗೆ ಸರಿಯಾದ ಮತ್ತು ಸತ್ಯವನ್ನು ತಿಳಿಸುವ ಬದ್ಧತೆ ಮತ್ತು‌ ಜವಾಬ್ದಾರಿಯನ್ನು ಹೊಂದಿದ್ದೇವೆ . ಆದ್ದರಿಂದ ತಮ್ಮ ಸಾವಿರ ಸುಳ್ಳಿನ ಟ್ಟೀಟ್ ಗಳಿಗೂ ಕೂಡ ಉತ್ತರಿಸುವ ಎದೆಗಾರಿಕೆ ನಮ್ಮಲ್ಲಿದೆ. ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯು ಕೇಂದ್ರ ಸರ್ಕಾರದ ನೀತಿ ಯೋಜನೆಯಂತೆ ಜಾರಿಯಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸಾರಿಗೆ ಸಂಸ್ಥೆಗಳು ನೇರವಾಗಿ ಖರೀದಿಸುವಂತಿಲ್ಲ, ಖಾಸಗಿ ಕಂಪನಿಯವರು ಮಾಲೀಕತ್ವ ಹೊಂದಿರುತ್ತಾರೆ, ಅವರಿಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ನೇರವಾಗಿ ನೀಡುತ್ತದೆ, ಚಾಲಕರನ್ನು ನಿಯೋಜಿಸುವ ಕಾರ್ಯವು ಖಾಸಗಿ ಅವರಿಗೆ ನೀಡಲಾಗಿದೆ‌. ಚಾಲಕರ ವೇತನ, ಆಯ್ಕೆ ಯಾವುದರಲ್ಲಿಯೂ ಸಾರಿಗೆ ಸಂಸ್ಥೆಗಳಿಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿಲ್ಲ. ಬಸ್ಸುಗಳ ಕಾರ್ಯಾಚರಣೆ ಹೊಣೆ ಮಾತ್ರ ಸಾರಿಗೆ ಸಂಸ್ಥೆಗಳದ್ದು, ಈ ವಿಷಯವನ್ನು ಹತ್ತು ಹಲವಾರು ನಾನು ಸ್ಪಷ್ಟಪಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಲ್ಲಿಯೇ ಇದ್ದು, ಪ್ರಧಾನ‌ ಮಂತ್ರಿ @narendramodi ಯವರ ನೀತಿ‌ ನಿಯಮಗಳ ಬಗ್ಗೆಯೇ ಅರಿವಿಲ್ಲದೆ ಮಾತನಾಡುತ್ತಿರುವ @JoshiPralhad ಅವರೇ,

ರಾಜ್ಯದ ವಿರೋಧ ಪಕ್ಷದ ನಾಯಕರಾದ @RAshokaBJP ,‌ ಬಿ.ಜೆ.ಪಿ ಯ ರಾಜ್ಯಧ್ಯಕ್ಷರಾದ @BYVijayendra ಅವರುಗಳೇ ನಿಜಕ್ಕೂ ನೀವುಗಳು ತಮ್ಮ ಬುದ್ಧಿವಂತಿಕೆಯನ್ನು ಅಡವಿಟ್ಟಿರುವ ಹಾಗೆ… pic.twitter.com/BZ1EUWo800

— Ramalinga Reddy (@RLR_BTM) May 31, 2024

ರಾಜ್ಯದ ಯುವಕರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಲು ಕಾರಣವಾದ ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ, ಪ್ರಹ್ಲಾದ್ ಜೋಷಿ ಅವರಿಂಗಿಂತ ಸಮರ್ಥವಾಗಿ ಉತ್ತರಿಸಲು ಯಾರಿಂದ ಸಾಧ್ಯ‌?? ಬಿಜೆಪಿ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ ರೂ.5900 ಕೋಟಿ ಸಾಲ ಮಾಡಿ ಆ ಹೊರೆಯನ್ನು ನಮ್ಮ‌ ತಲೆ ಮೇಲೆ ಹೊರೆಸಿ ಹೋಗಿದ್ದಾರೆ. ಶಾಂತಿನಗರ ಟಿ.ಟಿ.ಎಂ.ಸಿಯನ್ನು ಸಾಲ ಪಡೆಯಲು ಅಡವಿಟ್ಟಿದ್ದ ವಿಷಯ ಜಗಜಾಹ್ಹೀರಾವಾಗಿತ್ತು. ಸಾರಿಗೆ ಸಂಸ್ಥೆಗಳಲ್ಲಿ 14000 ಹುದ್ದೆಗಳು ಖಾಲಿಯಿದ್ದರೂ, ಬಿ.ಜೆ.ಪಿ ಆಡಳಿತದ ಅವಧಿಯಲ್ಲಿ ಒಂದೇ ಒಂದು ನೇಮಕಾತಿ ಮಾಡದೆ, ನಮ್ಮ ಅವಧಿಯಲ್ಲಿ ಹೊರಡಿಸಲಾಗಿದ್ದ ನೇಮಕಾತಿ‌ ಪ್ರಕಟಣೆಗಳಿಗೂ ತಡೆತಂದಿರುವುದು ನಿಮ್ಮ ಗರಿಮೆ ಮತ್ತು ಹಿರಿಮೆ ನಮ್ಮ‌ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು ಈಗಾಗಲೇ 1650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ ಎಂಬುದಾಗಿ ಹೇಳಿದ್ದಾರೆ.

ನಾಲ್ಕು ಸಾರಿಗೆ ನಿಗಮಗಳಲ್ಲಿ‌ ಕಳೆದ ಒಂದು ವರುಷದ ಅವಧಿಯಲ್ಲಿ 500 ಕ್ಕೂ ಹೆಚ್ಚು ಅನುಕಂಪ ಆಧಾರದ‌ ಮೇಲೆ‌ ನೇಮಕಾತಿ‌ ಪತ್ರವನ್ನು ಸಿಬ್ಬಂದಿಗಳ ಅವಲಂಬಿತರಿಗೆ ನೀಡಲಾಗಿದೆ. ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಬಗ್ಗೆ ತಮಗೆ ಯಾವುದೇ ಪಶ್ಚಾತ್ತಾಪವಿಲ್ಲದಿರುವುದು ವಿಷಾದನೀಯ. ಬರೀ ಭಾಷಣಕ್ಕೆ ಸೀಮಿತವಾಗದೆ, ಕೋಟಿ ಕೋಟಿ ಉದ್ಯೋಗ ಕರುಣಿಸುವ ಸುಳ್ಳು ಭರವಸೆ ನೀಡಿ, ಯುವಜನರನ್ನು ಶೋಷಿಸುವ ಕಾರ್ಯ ಮಾಡದೇ, ನುಡಿದಂತೆ ನಡೆಯುತ್ತಿದ್ದೇವೆ ಎಂದಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರುಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ , ಡಕೋಟ ಬಸ್ಸುಗಳಲ್ಲೇ ಕಾರ್ಯಾಚರಣೆ ಮಾಡಿ ,‌ತಮ್ಮ ಅವಧಿಯ ಕೊಳೆ ತೊಳೆಯುವ ಕಾರ್ಯವೂ ಕೂಡ ಭರದಿಂದ ಸಾಗಿದೆ. ತಮ್ಮ ಈ ಎಲ್ಲಾ ಸುಳ್ಳು, ಕಪೋಲ ಕಲ್ಪಿತ, ಆಧಾರರಹಿತ ಟ್ಟೀಟ್ ಗಳ ಸರಮಾಲೆಗೆ ಶೀಘ್ರದಲ್ಲಿಯೇ ಮುಕ್ತಿ ಸಿಗುವ ಭರವಸೆ ನಮಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಮಾನವೀಯತೆ ಮೆರೆದ ‘ಶಾಸಕ ಬೇಳೂರು ಗೋಪಾಲಕೃಷ್ಣ’: ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ‘ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ’

ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್‌ ಈಶ್ವರಪ್ಪ ಸವಾಲು

Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.