ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿನ ಶಾಳೆಗಳು ನಿನ್ನೆಯಿಂದ ಆರಂಭಗೊಂಡಿದ್ದು, ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಳೆಗಳಿಗೆ ಮಕ್ಕಳು ಮರಳಿದ್ದಾರೆ. ಈ ಮೂಲಕ41 ದಿನಗಳ ಬೇಸಿಗೆ ರಜೆ ಮುಗಿಸಿದ ಮಕ್ಕಳಿಗೆ ಹೂ, ಸಿಹಿ ನೀಡಿ ಸ್ವಾಗತಿಸಲಾಗಿದೆ.
ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿತ್ತು. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ ಎಂದು ಹೇಳಿದೆ.
ಶಾಲಾ ಮಕ್ಕಳಿಗೆ ಮೊದಲ ದಿನವೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಣೆ
ಶಾಲಾ ಮಕ್ಕಳಿಗೆ ಮೊದಲ ದಿನದಿಂದಲೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುಗಿದೆ. ಇದೇ ಮೊದಲ ಬಾರಿ ಶಾಲಾ ಆರಂಭಕ್ಕೂ ಮೊದಲೇ ಎಲ್ಲ ವಿಷಯಗಳ ಪಠ್ಯಪುಸ್ತಕಗಳು ಶಾಲೆಗಳನ್ನು ತಲುಪಿವೆ. ಒಂದೇ ಬಾರಿಗೆ ಎರಡೂ ಜೊತೆ ಸಮವಸ್ತ್ರ ನೀಡಲಾಗುತ್ತಿದೆ.