ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣದಲ್ಲಿ ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಯಾವುದೇ ಕ್ಷಣದಲ್ಲೂ ಭವಾನಿ ರೇವಣ್ಣರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ. ವಿಚಾರಣೆಗೆಗಾಗಿ ಹೊಳೆನರಸೀಪುರಕ್ಕೆ ಆಗಮಿಸುವುದಾಗಿ ಎಸ್ ಐಟಿ ಹೇಳಿದ್ದು, ಒಂದು ವೇಳೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದ್ರೆ ಬಂಧಿಸುವ ಸಾಧ್ಯತೆ ಇದೆ.
ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಅವರನ್ನು ಎಸ್ಐಟಿ ಅಧಿಕಾರಿಗಳು ಶೀಘ್ರವೇ ಬಂಧಿಸೋ ಸಾಧ್ಯತೆ ಇದೆ. ಈ ಮೂಲಕ ಪುತ್ರ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಅಮ್ಮ ಭವಾನಿ ರೇವಣ್ಣಗೂ ಕೋರ್ಟ್ ಬಿಗ್ ಶಾಕ್ ನೀಡಿದೆ.