ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ ಐಟಿ ವಶಕದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣರ ವಿಚಾರಣೆಯನ್ನು ಎಸ್ ಐಟಿ ಅಧಿಕಾರಿಗಳು ರಾತ್ರಿ 10.30 ರವರೆಗೂ ನಡೆಸಲಾಗಿದೆ.
ಲೈಂಗಿಕ ದೌರ್ಜನ್ಯ ಪರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣರನ್ನು ಆರು ದಿನಗಳ ವಶಕ್ಕೆ ಪಡೆದಿರುವ ಎಸ್ ಐಟಿ ಅಧಿಕಾರಿಗಳು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ. ರಾತ್ರಿ ೧೧.೩೦ ರ ನಂತರ ನಿದ್ರೆಗೆ ಅವಕಾಶ ಮಾಡಿಕೊಡಲಾಗಿತ್ತು.
ಇನ್ನು ಎಸ್ ಐಟಿ ವಿಚಾರಣೆ ವೇಳೆ ಸೂಕ್ತ ಉತ್ತರ ನೀಡದ ಪ್ರಜ್ವಲ್ ರೇವಣ್ನ, ಇದು ರಾಜಕೀಯ ಪಿತೂರಿ, ನನ್ನನ್ನು ಸಿಲುಕಿಸಲಾಗಿದೆ. ಸಂತ್ರಸ್ತೆಯರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇಂದು ಟೆಕ್ನಿಕಲ್ ಎವಿಡೆನ್ಸ್ ಇಟ್ಟುಕೊಂಡು ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದು, ಇಂದು ಸಂಜೆ ಅಥವಾ ನಾಳೆ ಸ್ಥಳ ಮಹಜರು ನಡೆಸಲಿದ್ದಾರೆ ಎಂದು ವರದಿಯಾಗಿದೆ.