ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ರೂ.ಗಳ ಹಗರಣ ಸಂಬಂಧ ಇಂದು ಎಸ್ ಐಟಿ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದೆ.
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಲು ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಇಬ್ಬರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಪದ್ಮಾನಾಭ್ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಲೆಕ್ಕಾಧಿಕಾರಿ ಪರಶುರಾಮರನ್ನು ವಶಕ್ಕೆ ಪಡೆದು ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.