Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: RCB ತಂಡಕ್ಕೆ ದೊಡ್ಡ ಶಾಕ್: ಡೆಲ್ಲಿ ವಿರುದ್ಧದ ಪಂದ್ಯದಿಂದ ಫಿಲ್ ಸಾಲ್ಟ್ ಔಟ್!

26/04/2026 9:21 PM

ದಾವೂದ್ ಇಬ್ರಾಹಿಂ ಬಲಗೈ ಬಂಟ, ಮೋಸ್ಟ್ ವಾಂಟೆಡ್ ಡ್ರಗ್ ಮಾಫಿಯಾ ಕಿಂಗ್ ಸಲೀಂ ಡೋಲಾ ಟರ್ಕಿಯಲ್ಲಿ ಬಂಧನ!

26/04/2026 8:49 PM

ಇರಾನ್‌ನ ನೂತನ ಸರ್ವೋಚ್ಚ ನಾಯಕನೂ ಸತ್ತಿದ್ದಾರೆಯೇ? ಮೃತ ನಾಯಕರ ಸಾಲಿನಲ್ಲಿ ಮೊಜ್ತಬಾ ಚಿತ್ರ: ಹೆಚ್ಚಿದ ಅನುಮಾನ!

26/04/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ : ʻKSRTCʼ ಬಸ್‌ ಪಾಸ್‌ ಗೆ ಅರ್ಜಿ ಸಲ್ಲಿಸುವುದು ಹೇಗೆ? ದರ ಎಷ್ಟು? ಇಲ್ಲಿದೆ ಮಾಹಿತಿ
KARNATAKA

ವಿದ್ಯಾರ್ಥಿಗಳೇ ಗಮನಿಸಿ : ʻKSRTCʼ ಬಸ್‌ ಪಾಸ್‌ ಗೆ ಅರ್ಜಿ ಸಲ್ಲಿಸುವುದು ಹೇಗೆ? ದರ ಎಷ್ಟು? ಇಲ್ಲಿದೆ ಮಾಹಿತಿ

By kannadanewsnow5701/06/2024 11:09 AM

ಬೆಂಗಳೂರು: ಶಾಲಾ-ಕಾಲೇಜುಗಳು ಅಧಿಕೃತವಾಗಿ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ಬಸ್ ಪಾಸ್ ಒದಗಿಸಲು ಕೆಎಸ್‌ಆರ್ ಟಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು https://sevasindhuservices.karnataka.gov.in/ buspassservices/ ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್‌ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳುಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದಿದೆ.

ವಿದ್ಯಾರ್ಥಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ

  1. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು ಪೋರ್ಟಲ್ ಐಡಿ URL-https://sevasindhuservices.karnataka.gov.in/buspassservices/
  2. ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುಧೇ ಶುಲ್ಕ ಇರುವುದಿಲ್ಲ.
  3. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.
  4. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು ಆeಛಿಟಚಿಡಿಚಿಣioಟಿ ಈoಡಿmಅನ್ನು ಸೇವಾಸಿಂಧು ತಂತ್ರಾAಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ (https://ksrtc.karnataka.gov.in/studentpass)ಡೌನ್‌ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submiಣಮಾಡುವುದು.
  5. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿ ಪಾಸುಗಳನ್ನು ದಿನಾಂಕ: 01.06.2024 ರಿಂದ ನಿಗದಿತ ಪಾಸ್ ಕೌಂಟರ್ ಗಳಲ್ಲಿ ವಿತರಿಸಲಾಗುವುದು.
  6. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
  7. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ.ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ.ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನುಪಡೆಯಬಹುದಾಗಿರುತ್ತದೆ.
  8. ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in/student pass

ಹೀಗಿದೆ ವಿದ್ಯಾರ್ಥಿ ಪಾಸಿನ ದರದ ವಿವರ

  • ಪ್ರಾಥಮಿಕ ಶಾಲೆ – 10 ತಿಂಗಳ ಅವಧಿಗೆ ಸಾಮಾನ್ಯ ವಿದ್ಯಾರ್ಥಿಗಳಿಗೆ 100+ 50 ಸಂಸ್ಕರಣಾ ಶುಲ್ಕ ಸೇರಿ ರೂ.150. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ.750 ಸಾಮಾನ್ಯ ವರ್ಗದವರಿಗೆ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಪ್ರೌಢಶಾಲಾ ಬಾಲಕಿಯರಿಗೆ 10 ತಿಂಗಳಿಗೆ ರೂ.550 ಸಾಮಾನ್ಯ ವಿದ್ಯಾರ್ಥಿಗಳಿಗೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಕಾಲೇಜು, ಡಿಪ್ಲೋಮಾ ಸಾಮಾನ್ಯ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ.1050. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಐಟಿಐ 12 ತಿಂಗಳ ಸಾಮಾನ್ಯ ವಿದ್ಯಾರ್ಥಿಗಳ ಬಸ್ ಪಾಸ್ ಗೆ ರೂ.1310. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.160.
  • ವೃತ್ತಿಪರ ಕೋರ್ಸುಗಳ 10 ತಿಂಗಳು ಸಾಮಾನ್ಯ ವಿದ್ಯಾರ್ಥಿಗಳ ಪಾಸ್ ಗೆ ರೂ.1550. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
  • ಸಂಜೆ ಕಾಲೇಜು, ಪಿಹೆಚ್ ಡಿ ವಿದ್ಯಾರ್ಥಿಗಳಿಗೆ 10 ತಿಂಗಳ ಸಾಮಾನ್ಯ ವಿದ್ಯಾರ್ಥಿಗಳ ಬಸ್ ಪಾಸ್ ಗೆ ರೂ.1350. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.

ವರದಿ: ವಸಂತ ಬಿ ಈಶ್ವರಗೆರೆ

Students should note: How to apply for KSRTC Bus Pass? How much is the rate? Here's the information ವಿದ್ಯಾರ್ಥಿಗಳೇ ಗಮನಿಸಿ : ʻKSRTCʼ ಬಸ್‌ ಪಾಸ್‌ ಗೆ ಅರ್ಜಿ ಸಲ್ಲಿಸುವುದ ಹೇಗೆ? ದರ ಎಷ್ಟು? ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM1 Min Read

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM1 Min Read
Recent News

BREAKING: RCB ತಂಡಕ್ಕೆ ದೊಡ್ಡ ಶಾಕ್: ಡೆಲ್ಲಿ ವಿರುದ್ಧದ ಪಂದ್ಯದಿಂದ ಫಿಲ್ ಸಾಲ್ಟ್ ಔಟ್!

26/04/2026 9:21 PM

ದಾವೂದ್ ಇಬ್ರಾಹಿಂ ಬಲಗೈ ಬಂಟ, ಮೋಸ್ಟ್ ವಾಂಟೆಡ್ ಡ್ರಗ್ ಮಾಫಿಯಾ ಕಿಂಗ್ ಸಲೀಂ ಡೋಲಾ ಟರ್ಕಿಯಲ್ಲಿ ಬಂಧನ!

26/04/2026 8:49 PM

ಇರಾನ್‌ನ ನೂತನ ಸರ್ವೋಚ್ಚ ನಾಯಕನೂ ಸತ್ತಿದ್ದಾರೆಯೇ? ಮೃತ ನಾಯಕರ ಸಾಲಿನಲ್ಲಿ ಮೊಜ್ತಬಾ ಚಿತ್ರ: ಹೆಚ್ಚಿದ ಅನುಮಾನ!

26/04/2026 8:41 PM

BREAKING: ಮಾಲಿ ದೇಶದಲ್ಲಿ ಭೀಕರ ಉಗ್ರರ ದಾಳಿ: ರಕ್ಷಣಾ ಸಚಿವ ಸಾದಿಯೊ ಕಾಮರಾ ಹತ್ಯೆ!

26/04/2026 8:31 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

By kannadanewsnow0926/04/2026 7:26 PM KARNATAKA 4 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಕಳೆದ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ತೀವ್ರ ತರಹದ ಹಾನಿ ಉಂಟಾಗಿದೆ. ಉಳವಿಯ…

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.