ಶಿವಮೊಗ್ಗ: ಜೂನ್.3ರಂದು ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾರರನ್ನು ಮನವೊಲಿಸೋ ಕೆಲಸದಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೊಡಗಿದ್ದಾರೆ.
ಇಂದು ಸಾಗರ ನಗರದ ಜೂನಿಯರ್ ಕಾಲೇಜಿಗೆ ಭೇಟಿ ನೀಡಿದಂತ ಅವರು, ಕಾಲೇಜಿನ ಉಪನ್ಯಾಸಕರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಮತದಾರರು, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಮತ ನೀಡುವಂತ ಭರವಸೆ ನೀಡಿದ್ದಾರೆ.
ಇದಲ್ಲದೇ ಸಾಗರ ನಗರದಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸೇರಿದಂತೆ ಇತರೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು.
ಶಾಸಕ ಬೇಳೂರು ಗೋಪಾಲಕೃಷ್ಣ ಮತಬೇಟೆಯ ಬೆನ್ನಲ್ಲೇ, ಸಾಗರ ತಾಲೂಕಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಹೆಚ್ಚು ಮತಗಳು ಬೀಳಲಿವೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಇದೇ ಸಂದರ್ಭದಲ್ಲಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 600ಕ್ಕೆ 581 ಅಂಕ ಪಡೆದಂತ ವಿದ್ಯಾರ್ಥಿನಿ ಸೈಮಾಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸಿಹಿ ತಿನಿಸಿ ಶುಭ ಹಾರೈಸಿದರು. ಅಲ್ಲದೇ ಸರ್ಕಾರಿ ಕಾಲೇಜು ವಿದ್ಯಾರ್ಥಿನಿ ಸೈಮಾ ಸಾಧನೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಕೊಂಡಾಡಿದರು.
ವರದಿ: ವಸಂತ ಬಿ ಈಶ್ವರಗೆರೆ