ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಮೃತ ಅಧೀಕ್ಷಕ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತ್ರ, ಪತ್ನಿ ಕವಿತಾ ಆಘಾತಕ್ಕೆ ಒಳಗಾಗಿದ್ದರು. ಇದೇ ಆಘಾತದಲ್ಲಿ ಅವರು ಊಟ ಸೇವಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಅಸ್ವಸ್ಥಗೊಂಡಿದ್ದಾರೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗೋ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದಂತ ಅವರು, ನನ್ನ ಗಂಡ ಚಂದ್ರಶೇಖರನ್ ಸಾವಿಗೆ ನ್ಯಾಯ ಸಿಗಬೇಕು. ಗಂಡನ ಆತ್ಮಕ್ಕೆ ಶಾಂತಿ ಸಿಗಬೇಕು ಅಂದ್ರೆ ಕಚೇರಿಯಲ್ಲಿ ನಡೆದಿರುವಂತ ಸತ್ಯ ಹೊರಬರಲೇಬೇಕು. ನಮಗೆ ನ್ಯಾಯ ಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಅಂತ ಆಗ್ರಹಿಸಿದ್ದರು.
ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಿಗದ ರಿಲೀಫ್: ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್