ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದಂತ ಇಬ್ಬರು ಅಧಿಕಾರಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಇಬ್ಬರು ಅಧಿಕಾರಿಗಳನ್ನು 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ನಿಗಮದ ಈ ಹಿಂದಿನ ಎಂ.ಡಿ ಜೆ.ಜೆ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರುಶುರಾಮ್ ಅವರನ್ನು ಬಂಧಿಸಿದೆ.
ಎಸ್ಐಟಿ ಅಧಿಕಾರಿಗಳು ಬಂಧಿಸಿರುವಂತ ಪದ್ಮನಾಭ್ ಹಾಗೂ ಪರುಶುರಾಮ್ ಅವರನ್ನು ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ, ಕೋರ್ಟ್ ಆದೇಶಿಸಿದೆ.
ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಂ.ಡಿಯಾಗಿದ್ದಂತ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದಂತ ಪರುಶುರಾಮ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿತ್ತು. ಅಲ್ಲದೇ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು.
ಲೋಕಸಭಾ ಚುನಾವಣೆಯಲ್ಲಿ NDA ಮೈತ್ರಿಕೂಟ ಕನಿಷ್ಠ 295 ಸ್ಥಾನ ಗೆಲುವು: ಮಲ್ಲಿಕಾರ್ಜುನ ಖರ್ಗೆ
BIG NEWS: ರಾಜ್ಯ ಸರ್ಕಾರದಿಂದ ‘ಗುತ್ತಿಗೆದಾರ’ರಿಗೆ ಬಿಗ್ ಶಾಕ್: ಈ ನಿಯಮ ಪಾಲಿಸದಿದ್ರೆ ‘ಡಿಬಾರ್ ಫಿಕ್ಸ್’