ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ತಿನ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ.
ಈಗಾಗಲೇ ಬಿಜೆಪಿಯಿಂದ ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಿಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾಯಿತರಾಗಲು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ, ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜ ಹಾಗೂ ತಮಟಗಾರ ಹೆಸರು ಅಂತಿಮಗೊಳಿಸಲಾಗಿದೆ. ಈ ಹೆಸರುಗಳನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಘೋಷಣೆ ಮಾಡೋದು ಮಾತ್ರವೇ ಬಾಕಿ ಇದೆ.
BIG Alert: ನೀವು ‘ರಸ್ತೆ ಬದಿ’ಯಲ್ಲಿ ನಿಂತುಕೊಳ್ಳೋ ಮುನ್ನಾ ತಪ್ಪದೇ ಈ ಸುದ್ದಿ ಓದಿ | Accident in Ahmedabad