ವಿಜಯಪುರ : ಜಿಲ್ಲೆಯ ತಿಕೋಟಾ ಸಮೀಪ ನಿನ್ನೆ ತಡರಾತ್ರಿ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ನಡೆದ ರಸ್ತೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ರಾಮು ರಾಠೋಡ್ ಹಾಗೂ ಕಿಟ್ಟು ಎಂದು ಹೇಳಲಾಗುತ್ತಿದ್ದು, ಬಸ್ ತೆರಳುತ್ತಿದ್ದ ವೇಳೆ ಬೈಕ್ ಗೆ ಡಿಕ್ಕಿಯಾಗಿ ರಾಮು ಕಿಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯ ರತ್ನಾಪುರ ಕ್ರಾಸ್ ಬಳಿ ಈ ಒಂದು ಅಪಘಾತ ನಡೆದಿದೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.