ಚಿಕ್ಕಮಗಳೂರು: ನಾಳೆ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರು, ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ 4ರವರೆಗೆ ಮತದಾನ ಆರಂಭಗೊಳ್ಳಲಿದ್ದು, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದರು. ಇಂದು ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ ಕೂಡ ಮಾಡಿದ್ದರು.
ಚಿಕ್ಕಮಗಳೂರು, ಮಂಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮತಬೇಟೆ ನಡೆಸಿದ್ದಂತ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಸಾಥ್ ನೀಡಿ, ಮತದಾರರ ಮನವೊಲಿಕೆ ಪ್ರಯತ್ನಕ್ಕೆ ಇಳಿದಿದ್ದರು.
ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ತಮ್ಮ ಪಕ್ಷದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಪರವಾಗಿ ಮತಯಾಚನೆ ಮಾಡಿದ್ರೇ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ನಿನ್ನೆಯಂತೂ ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.
ಭದ್ರಾವತಿಯಲ್ಲಿ ಬಿಕೆ ಸಂಗಮೇಶ್ ಅವರು ಶಿಕ್ಷಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸೋದಕ್ಕೆ ಸರಣಿ ಸಭೆ ನಡೆಸಿ, ಮನವೊಲಿಸಿದ್ದರು. ಮಂಗಳೂರು, ಚಿಕ್ಕಮಗಳೂರು, ಕೊಡಗಿನಲ್ಲೂ ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರು ಒಲವು ತೋರದಕ್ಕೆ ನಾಯಕರು ಅಖಾಡಕ್ಕೆ ಇಳಿದು, ಮತಬೇಟೆಯಾಡಿದ್ದರು.
ಈ ಎಲ್ಲಾ ಕಾರಣದಿಂದಾಗಿ ಈ ಬಾರಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವು ಸಾಧಿಸುವಂತ ವಿಶ್ವಾಸವಿದೆ ಎನ್ನಲಾಗುತ್ತಿದೆ. ಜೊತೆಗೆ ಶಿಕ್ಷಕರ ಬಹು ದಿನಗಳ ಬೇಡಿಕೆಯಾಗಿರುವಂತ NPS ರದ್ದುಗೊಳಿಸಿ OPS ಜಾರಿಗೊಳಿಸಲಾಗುತ್ತದೆ. ಅನುದಾನಿತ ಶಾಲಾ ಶಿಕ್ಷಕರನ್ನು ಪಿಂಚಣಿಗೆ ಒಳಪಡಿಸಲಾಗುತ್ತದೆ. ಖಾಸಗಿ ಶಾಲಾ ಶಿಕ್ಷಕರಿಗೂ ವೈದ್ಯಕೀಯ ವಿಮಾ ಸೌಲಭ್ಯ ಒದಗಿಸೋ ಭರವಸೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದೆ.
ಈ ಹಿನ್ನಲೆಯಲ್ಲಿ ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತದಾರರು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡು 4 ಗಂಟೆಯವರೆಗೆ ನಡೆಯಲಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕ್ರಮ ಸಂಖ್ಯೆ.2ರಲ್ಲಿನ ಡಾ.ಕೆ.ಕೆ ಮಂಜುನಾಥ್ ಕುಮಾರ್(ಮಾಸ್ಟ್ರು) ಅವರಿಗೆ ಪ್ರಾಶಸ್ತ್ಯ ಮತವನ್ನು ಮತದಾರರು ಚಲಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಗೆಲುವಿನ ವಿಶ್ವಾಸದಲ್ಲಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಇದ್ದಾರೆ ಎಂಬುದಾಗಿ ತಿಳಿದು ಬಂದಿದೆ.
‘ಮೋದಿ’ ಮತ್ತೊಮ್ಮೆ ‘ಪ್ರಧಾನಿ’ಯಾಗ್ತಾರೆ: ‘ಕಾಲ ಭೈರವೇಶ್ವರ’ನ ‘ಶ್ವಾನ ಭವಿಷ್ಯ’