ಹುಬ್ಬಳ್ಳಿ : ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಹೆಚ್ಚಾಗಲಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಕಲಹ ಕೂಡ ಹೊರಬರಲಿದ್ದು, ಕಾಂಗ್ರೆಸ್ ನವರ ಅಸಮಾಧಾನದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಕಮಲ ಮಾಡುವ ಅವಶ್ಯಕತೆಯೇ ಇಲ್ಲ, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಕಲಹ ಹೆಚ್ಚಾಗಿ ಸರ್ಕಾರವೇ ಪತನವಾಗಲಿದೆ ಎಂದು ತಿಳಿಸಿದ್ದಾರೆ.