ಬೆಂಗಳೂರು : ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ ಬೆನ್ನಲ್ಲೇ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವಡೆ ಮಳೆಯಾಗುತ್ತಿದ್ದು, ಇಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ಕರಾವಳಿ ಸೇರಿದಂತೆ ೧೩ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಮೈಸೂರು, ತುಮಕೂರು, ಚಿಕತ್ರದುರ್ಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಿಗಿರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮಂಗಳವಾರ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.