ಮೈಸೂರು: ಜಿಲ್ಲೆಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದಂತ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಲ್ಲದೇ ತೀವ್ರವಾಗಿ ಅಸ್ವಸ್ಥಗೊಂಡಿದ್ದಂತ ಓರ್ವ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋ ಘಟನೆ ನಡೆದಿದೆ.
ಮೈಸೂರು ತಾಲೂಕಿನ ಮಾರ್ಬಳ್ಳಿಯಲ್ಲಿ ಮೇ.31ರಂದು ಗೃಹ ಪ್ರವೇಶ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ಊಟ ಸೇವಿಸಿದಂತ ಒಂದೇ ಕುಟುಂಬದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ. ಅವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮೇ.31ರಂದು ಮಾರ್ಬಳ್ಳಿಯಲ್ಲಿ ನಡೆದಿದ್ದಂತ ಗೃಹ ಪ್ರವೇಶದಲ್ಲಿ 300ಕ್ಕೂ ಹೆಚ್ಚು ಜನರು ಊಟ ಮಾಡಿದ್ದರು. ಮಾರ್ಬಳ್ಳಿ ಬಿಟ್ಟು ಬೇರೆ ಗ್ರಾಮದಿಂದಲೂ ಬಂದು ಊಟ ಮಾಡಿದ್ದರು. ಮಾರ್ಬಳ್ಳಿ ಗ್ರಾಮದಲ್ಲಿ ಊಟ ಮಾಡಿದವರಿಗೆ ಮಾತ್ರವೇ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಆದ್ರೇ ಬೇರೆ ಊರಿನಿಂದ ಬಂದು ಊಟ ಮಾಡಿದಂತ ಯಾರಿಗೂ ಅಸ್ವಸ್ಥತೆ ಕಾಣಿಸಿಕೊಂಡಿಲ್ಲ.
ಕಾರ್ಮಿಕರೇ ಗಮನಿಸಿ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ʻಸೌಲಭ್ಯʼಗಳು!
‘ಬ್ರದರ್’ ಎನ್ನುವ ಕಾರಣಕ್ಕೆ ಸಿದ್ಧರಾಮಯ್ಯ ಸರ್ಕಾರ ‘ಈ ಪೆಡ್ಲರ್’ಗೂ ‘ಅಮಾಯಕ’ ಪಟ್ಟ ಕಟ್ಟಿದರೆ ಅಚ್ಚರಿ ಇಲ್ಲ: ಬಿಜೆಪಿ