ಬೆಂಗಳೂರು: ನಾಳೆ ಲೋಕಸಭಾ ಚುನಾವಣೆಗೆ ಮತ ಏಣಿಕೆ ಕಾರ್ಯ ನಡೆಯಲಿದೆ. ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ಮತಎಣಿಕೆ ಕಾರ್ಯ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು, ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ನಾಳೆ ಲೋಕಸಭಾ ಚುನಾವಣೆಯ ಮತಏಣಿಕೆ ಕಾರ್ಯ ನಡೆಯಲಿದೆ. ಎಲ್ಲಾ ಕೇಂದ್ರಗಳ ಬಳಿಯಲ್ಲೂ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.
ಬೆಂಗಳೂರಿನಲ್ಲಿ 1524 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 13 ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ. ಈಗಾಗಲೇ 512 ಪೊಲೀಸ್ ಸಿಬ್ಬಂದಿ ಸ್ಟ್ರಾಂಗ್ ರೂಂ ಬಳಿಯಲ್ಲಿ ಭದ್ರತಾ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
3 ಶಿಫ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮತ ಏಣಿಕೆ ಕೇಂದ್ರದ ಸುತ್ತ 400 ಸಂಚಾರ ಪೊಲೀಸರನ್ನು ಸುಗಮ ಸಂಚಾರಕ್ಕಾಗಿ ನಿಯೋಜಿಸಲಾಗಿದೆ. ಯಾವುದೇ ಕಾನೂನು ಮತ್ತು ಸುವ್ಯವಸ್ಥತೆಯಲ್ಲಿ ಲೋಪವಾಗದಂತೆ ಭದ್ರತಾ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.
ಮತಏಣಿಕೆ ಕೇಂದ್ರದ ಒಳಗೆ ಗುರುತಿನ ಚೀಟಿ ಇದ್ದವರಿಗೆ ಮಾತ್ರವೇ ಅವಕಾಶವಿದೆ. ಅವರ ಹೊರತಾಗಿ ಬೇರೆ ಯಾರಿಗೂ ಒಳಗೆ ಪ್ರವೇಶಿಸಲು ಅವಕಾಶವಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಮೂರು ಮತ ಎಣಿಕೆ ಕೇಂದ್ರದ ಸುತ್ತಾಮುತ್ತಾ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ʻಪ್ರಧಾನಿ ಮೋದಿ ಮತ್ತೆ ಗೆದ್ದರೆ….ʼ : ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಕಣ್ಣಿಟ್ಟ ಚೀನಾ!
ʻಪ್ರಧಾನಿ ಮೋದಿ ಮತ್ತೆ ಗೆದ್ದರೆ….ʼ : ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಕಣ್ಣಿಟ್ಟ ಚೀನಾ!