ಉಡುಪಿ : ನಿನ್ನೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪುತ್ತಿರುವವರ ಘಟನೆ ನಡೆದಿದ್ದು, ಇದೀಗ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕೂಡ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಟ್ರಾನ್ಸ್ಫಾರ್ಮರ್ ದುರಸ್ತಿಯ ವೇಳೆ ಸಲೀಂ 38 ಸಾವನ್ನುಪ್ಪಿರುವ ದುರ್ದೈವಿ ಎಂದು ಹೇಳಲಾಗುತ್ತಿದೆ ಬೈಂದೂರು ಮೆಸ್ಕಾಂ ನಲ್ಲಿ ಕಳೆದ 8 ವರ್ಷದಿಂದ ಸಲೀಂ ಕೆಲಸ ಮಾಡುತ್ತಿದ್ದರು ಬೈಂದೂರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.