ಇಸ್ಲಾಮಾಬಾದ್: ಹಲವಾರು ಆರೋಪಗಳಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ( Pak Former prime minister Imran Khan ) ವಿರುದ್ಧದ ದೇಶದ್ರೋಹ ಪ್ರಕರಣವನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಎಎಫ್ಪಿ ವರದಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ನೇತೃತ್ವದ ಇಸ್ಲಾಮಾಬಾದ್ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ವರದಿ ತಿಳಿಸಿದೆ.
ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವಕೀಲ ಸಲ್ಮಾನ್ ಸಫ್ದರ್ ಖುಲಾಸೆಯನ್ನು ದೃಢಪಡಿಸಿದ್ದಾರೆ.
ಒಟ್ಟಾರೆಯಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಎನ್ನುವಂತೆ ಅವರ ವಿರುದ್ಧದ ದೇಶ ದ್ರೋಹ ಪ್ರಕರಣದಲ್ಲಿ ವಿಧಿಸಲಾಗಿದ್ದಂತ ಶಿಕ್ಷೆಯನ್ನು ಕೋರ್ಟ್ ಖುಲಾಸೆಗೊಳಿಸಿದೆ.
‘ಬ್ರದರ್’ ಎನ್ನುವ ಕಾರಣಕ್ಕೆ ಸಿದ್ಧರಾಮಯ್ಯ ಸರ್ಕಾರ ‘ಈ ಪೆಡ್ಲರ್’ಗೂ ‘ಅಮಾಯಕ’ ಪಟ್ಟ ಕಟ್ಟಿದರೆ ಅಚ್ಚರಿ ಇಲ್ಲ: ಬಿಜೆಪಿ