ಕೊಡಗು : ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಮೀನಾಮೇಷ ಎಣಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಿಎಂ ಎಸ್ಟಿ ಒಳ ಮೀಸಲಾತಿಗೆ ಕಮಿಷನ್ ರಚನೆ ಮಾಡಬೇಕು. ಈ ಮೂಲಕ ಎಸ್ಟಿ 49 ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದು ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಕೊಡಗಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ, ಆದರೆ ಎಸ್ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ, ಸಿಎಂ ಬೊಮ್ಮಾಯಿ ಒಳಮೀಸಲಾತಿಗೆ ಆಯೋಗ ರಚಿಸಿದರು, ಈಗಿನ ಸರಕಾರ ಎಲ್ಲಾವನ್ನು ಕಾರ್ಯರೂಪಕ್ಕೆ ತರಬೇಕು, ಜಾತಿ ಜನಗಣತಿ ಹೊರಗೆ ಬರಬೇಕು ಎಂದು ನಟ ಚೇತನ್ ಆಗ್ರಹಿಸಿದರು.
ಇನ್ನು ಅಲೆಮಾರಿ ಜನಾಂಗದ ಅಭಿವೃದ್ಧಿ ಕುರಿತಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ನಟ ಚೇತನ್ ಅವರು ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಪರ ಕೆಲಸ ಮಾಡುತ್ತಿಲ್ಲ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ನೀಡಿರುವ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ನೀಡಿ ಎಂದು ನಟ ಚೇತನ್ ಆಗ್ರಪಡಿಸಿದರು.