ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ರಾಜ್ಯದ ಆರೋಗ್ಯ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ-1 ಅವರು ಆರೋಗ್ಯ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2024-25 ನೇ ಸಾಲಿನ ವರ್ಗಾವಣೆಯನ್ನು ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ಕೆ’ಯಂತೆ ಕೈಗೊಳ್ಳಲು ಅನುಮತಿ ನೀಡಲಾಗುತ್ತಿದೆ ಎಂದಿದ್ದಾರೆ.
ಪುಸ್ತಾವನೆಯನ್ನು ಪರಿಶೀಲಿಸಿದ ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳ ಹಾಗೂ ಇತರೆ ಸಿಬ್ಬಂದಿಗಳ ವರ್ಗಾವಣೆ) ಕಾಯ 2011 ಹಾಗೂ ಕಾಲಕಾಲಕ್ಕೆ ಹೊರಡಿಸಲಾದ ತಿದ್ದುಪಡಿ ಕಾಯ್ದೆಗಳಡಿ ಹಾಗೂ ಈ ಕಾಯ್ದೆಯಡಿ ರಚಿಸಲಾಗಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಡಿಸಿ ಸರ್ಕಾರ ಸಹಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಮುಂದುವರೆದು, ಪುಸ್ತುತ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯು ತರವಾದ ನಂತರ, ಪುಸ್ತಾಪಿತ ವರ್ಗಾವಣಾ ಪ್ರಕ್ರಿಯೆಯನ್ನು ಕೈಗೊಂಡು, ಜುಲೈ 31, 2024ರೊಳಗಾಗಿ ಪೂರ್ಣಗೊಳಿಸುವಂತೆ ತಿಳಿಸಲು ನಿರ್ದೇಶಿಸಿದ್ದಾರೆ.
‘ಬ್ರದರ್’ ಎನ್ನುವ ಕಾರಣಕ್ಕೆ ಸಿದ್ಧರಾಮಯ್ಯ ಸರ್ಕಾರ ‘ಈ ಪೆಡ್ಲರ್’ಗೂ ‘ಅಮಾಯಕ’ ಪಟ್ಟ ಕಟ್ಟಿದರೆ ಅಚ್ಚರಿ ಇಲ್ಲ: ಬಿಜೆಪಿ