ಮೈಸೂರು : ತನ್ನದಲ್ಲದ ತಪ್ಪಿಗೆ ಮನನೊಂದು ಕಳ್ಳತನ ಆರೋಪ ಹೊರೆಸಿದ್ದಾರೆಂದು ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಹೌದು ಮೈಸೂರು ಜಿಲ್ಲೆಯ ನಂಜನಗೂಡು ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲ್ಮಲಿ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕಾರ್ಯನಿರ್ವಹಿಸುತ್ತಿದ್ದ ನಂಜೇಶ್ ಎಂಬಾತ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾನೆ. ನಂಜೇಶ್ ನಂಜನಗೂಡಿನ ಮಹದೇವ ನಗರದ ನಿವಾಸಿ ಎಂದು ಹೇಳಲಾಗುತ್ತಿದೆ.
ನಂಜೇಶ್ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಂಜೇಶ್ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಆವರಣದಲ್ಲಿ ಇದೀಗ ನೇಣಿಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ನಂಜನಗೂಡಿನ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೂ ಪೊಲೀಸರು ತನಿಖೆ ನಡೆಸಿದ್ದಾರೆ.