ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು, ಕಚೇರಿಯ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ನಂತ್ರ ಸಚಿವ ಬಿ.ನಾಗೇಂದ್ರ ಅವರ ಆಪ್ತ ನೆಕ್ಕಂಟಿ ನಾಗರಾಜ್ ಎಂಬುವರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ಬೆಂಗಳೂರಿನ ವಸಂತನಗರದಲ್ಲಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಸ್ಥಳ ಮಹಜರಿಗಾಗಿ ಎಸ್ಐಟಿ ಅಧಿಕಾರಿಗಳು ಇಬ್ಬರು ಆರೋಪಿಗಳೊಂದಿಗೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಡಿಜಿಟಲ್ ದಾಖಲಾತಿ ಸಂಗ್ರಹಿಸೋ ಕಾರ್ಯದಲ್ಲಿ ಎಸ್ಐಟಿ ಅಧಿಕಾರಿಗಳು ತೊಡಗಿದ್ದರು.
ಈ ಸಂದರ್ಭದಲ್ಲಿ ಕಚೇರಿಯಲ್ಲಿದ್ದಂತ ಸಚಿವ ಬಿ.ನಾಗೇಂದ್ರ ಅವರ ಆಪ್ತ ನೆಕ್ಕಂಟಿ ನಾಗರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಕ್ರಮದಲ್ಲಿ ಭಾಗಿಯಾಗಿರೋದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಅವರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್ಐಟಿ ಕಚೇರಿಗೆ ಬಂಧಿಸಿ ಕರೆದೊಯ್ಯುತ್ತಿದ್ದು, ಹಗರಣ ಸಂಬಂಧ ಮತ್ತಷ್ಟು ವಿಚಾರಣೆ ನಡೆಸೋ ಸಾಧ್ಯತೆ ಇದೆ.
ಅಂದಹಾಗೇ ನೆಕ್ಕಂಟಿ ನಾಗರಾಜ್ ಅವರು ಆಗಾಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಗೆ ತೆರಳುತ್ತಿದ್ದರಂತೆ. ಅಲ್ಲಿಗೆ ತೆರಳಿ, ಸಚಿವರು, ಅಧಿಕಾರಿಗಳಿಂದ ಕಚೇರಿಯ ಸಿಬ್ಬಂದಿಗಳಿಗೆ ಪೋನ್ ಮಾಡಿಸುತ್ತಿದ್ದರಂತೆ. ತಮ್ಮ ಕೆಲಸದ ನಿಮಿತ ಕಚೇರಿಗೆ ತೆರಳಿ ಸಚಿವರಿಂದ ಅಧಿಕಾರಿಗಳಿಗೆ ಕರೆ ಮಾಡಿಸಿ, ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಅವರನ್ನು ಈಗ ಎಸ್ಐಟಿ ವಶಕ್ಕೆ ಪಡೆದಿದೆ. ನಾಳೆ ಕೋರ್ಟ್ ಗೆ ಹಾಜರುಪಡಿಸಿ, ತಮ್ಮ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.