ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಎರಡ್ಮೂರು ದಿನ ಬೆಂಗಳುರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಭಾಗದ ಬಹುತೇಕ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳುರು, ಹಾಸನ, ಶಿವಮೊಗ್ಗ, ತುಮಕೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.