ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ.
ರಾಜ್ಯದ 11 ಕ್ಷೇತ್ರಗಳಲಿ ಬಿಜೆಪಿ,4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಡಿ.ಕೆ. ಸುರೇಶ್ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹಿನ್ನಡೆ ಅನುಭವಿಸಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಮುನ್ನಡೆ ಸಾಧಿಸಿದಾರೆ. ಅಂಚೆ ಮತ ಎಣಿಕೆಯಲ್ಲಿ ದಾವಣಗೆರೆಯ ಕಾಂಗ್ರೆಸಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹಿನ್ನಡೆ ಅನುಭವಿಸಿದ್ದಾರೆ. ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಮುನ್ನಡೆ ಸಾಧಿಸಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ದೇಶಾದ್ಯಂತ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 62 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.