ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಗೆ ಬಿಗ್ ಶಾಕ್ ಆಗಿದೆ. ಈವರೆಗಿನ ಲೋಕಸಭಾ ಚುನಾವಣೆ ಮತಏಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಕೆ ಸುರೇಶ್ ಭಾರಿ ಹಿನ್ನಡೆ ಉಂಟಾಗಿದೆ. ಈ ಕಾರಣದಿಂದಲೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಹತೋಟಿಗೆ ತರೋ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಕನಕಪುರದಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
BREAKING : ಲೋಕಸಭೆ ಚುನಾವಣೆ ಫಲಿತಾಂಶ : ದೇಶಾದ್ಯಂತ ʻNDAʼ 271, ʻಇಂಡಿಯಾʼ 183 ಕ್ಷೇತ್ರಗಳಲ್ಲಿ ಮುನ್ನಡೆ
Election Results 2024: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 54,658 ಮತಗಳಿಂದ ಮುನ್ನಡೆ