ಬೆಂಗಳೂರು: RTE ಅಡಿಯಲ್ಲಿ ಮಕ್ಕಳ ದಾಖಲಾತಿಗಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಾಳೆ ಆನ್ ಲೈನ್ ಮೂಲಕ ನಡೆಯಲಿದೆ. ಈ ಮೂಲಕ ಮೊದಲ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ ದಾಖಲಾತಿಗೆ ನಾಳೆ ಸೀಟು ಹಂಚಿಕೆಯನ್ನು ಶಆಲಾ ಶಿಕ್ಷಣ ಇಲಾಖೆ ಮಾಡಲಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ 2024-25ನೇ ಸಾಲಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ದಾಖಲಾತಿಗೆ ಮೊದಲ ಸುತ್ತಿನ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಡೆಸಲು ದಿನಾಂಕ: 05.06.2024 ನಿಗದಿಪಡಿಸಲಾಗಿತ್ತು ಎಂದಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಆರ್.ಟಿ.ಇ ಮೊದಲ ಸುತ್ತಿನ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದೂಡಿದ್ದು ದಿನಾಂಕ :07.06.2024ರಂದು ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಇಲಾಖಾ ಅಧಿಕೃತ ವೆಬ್ಸೈಟ್ http://www.schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಮಾಹಿತಿ ಪಡೆಯಬಹುದಾಗಿ ಎಂದು ತಿಳಿಸಿದ್ದಾರೆ.
Election Breaking: ಮಂಡ್ಯದಲ್ಲಿ ‘ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ’ ಭರ್ಜರಿ ಗೆಲುವು
BIG BREAKING: 25 ವರ್ಷಗಳ ಬಳಿಕ ‘ಕಾಂಗ್ರೆಸ್’ ತೆಕ್ಕೆಗೆ ಸಿಂ’ಹಾಸನ’: ‘ಪ್ರಜ್ವಲ್ ರೇವಣ್ಣ’ಗೆ ಹೀನಾಯ ಸೋಲು