ಬೆಂಗಳೂರು : ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಬಿಜೆಪಿಗೆ ಇನ್ನೂ ಬಹುಮತ ಸಿಗದ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಇಂಡಿಯಾ ಮೈತ್ರಿಕೂಟ ಕಸರತ್ತು ಆರಂಭಿಸಿದೆ. ಸದ್ಯ ಎನ್ ಡಿಎ ಈ ಪೈಕಿ ಜೆಡಿಯು, ಟಿಡಿಪಿ ಒಟ್ಟು ೩೦ ಕ್ಷೇತ್ರಗಳಲ್ಲಿ ಮುನ್ನಡೆ, ಿಬ್ಬರು ನಾಯಕರ ಜೊತೆಗೆ ಮಾತನಾಡಲು ಕಾಂಗ್ರೆಸ್ ನಾಯಕರು ಸಿದ್ದರಾಗಿದ್ದಾರೆ ಎಂದು ಹೇಳಲಾಗಿದೆ.
ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಇಲ್ಲಿಯವರೆಗೆ ಬಿಜೆಪಿ 238, ಕಾಂಗ್ರೆಸ್ 97, ಎಸ್ಪಿ 33, ಟಿಎಂಸಿ 29, ಡಿಎಂಕೆ 21, ಜೆಡಿಯು 15, ಎಸ್ಎಸ್ (ಉದ್ಧವ್ ಠಾಕ್ರೆ ಬಣ) 10, ಎಸ್ಎಸ್ ಶಿಂಧೆ 6, ಟಿಡಿಪಿ 16, ವೈಎಸ್ಆರ್ಸಿಪಿ 4, ಎಎಪಿ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.