ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ ಉಂಟಾಗಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರಿನ 4 ಲೋಕಸಭಾ ಕ್ಷೇತ್ರದಲ್ಲಿ ಭಾರೀ ಮುಖಭಂಗವೇ ಉಂಟಾಗಿದೆ. ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಚಿಕ್ಕಮಗಳೂರು – ಉಡುಪಿ ಕ್ಷೇತ್ರವನ್ನು ತೊರೆದು ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರು. ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಇನ್ನೂ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಗೆಲುವು ಸಾಧಿಸಿದ್ರೇ, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಸೋಲು ಕಂಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪಿಸಿ ಮೋಹನ್ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದಂತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸಿಎನ್ ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ. ಹೃದಯವಂತ ಡಾಕ್ಟರ್ ಅನ್ನು ಮತದಾರರು ಮೊದಲ ಬಾರಿಗೆ ಕೈ ಹಿಡಿದಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಸೋಲು ಕಂಡಿದ್ದಾರೆ.
BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು
BREAKING: ಲೋಕಸಭೆ ಚುನಾವಣೆ ಫಲಿತಾಂಶ: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಗೆಲುವು | Rahul Gandhi wins