ಮಂಡ್ಯ : 2024ರ ಲೋಕಸಭಾ ಚುನಾವಣೆಯಲ್ಲಿ 5 ಲಕ್ಷಕ್ಕೂ ಅಧಿಕ ಮತದಾರರು ನನ್ನ ಪರವಾಗಿ ಮತ ಚಲಾಯಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ಜನರ ಈ ಒಂದು ತೀರ್ಪಿಗೆ ನಾನು ತಲೆಬಾಗುತ್ತೇನೆ ಎಂದು ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ತಿಳಿಸಿದರು.
ಅತಿ ಕಡಿಮೆ ಅವಧಿಯಲ್ಲಿ ಲಕ್ಷಾಂತರ ಜನರ ವಿಶ್ವಾಸ ಗಳಿಸಿರುವುದು ನನಗೆ ಹೆಮ್ಮೆ ಎನಿಸಿದೆ. ಮತದಾರರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ.ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲಾ ನನ್ನ ಮತದಾರ ಬಂಧುಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯರ್ಕತರೆಲ್ಲರಿಗೂ ನನ್ನ ಹೃದಯದ ಪೂರ್ವಕ ಅಭಿನಂದನೆಗಳು.
ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ, ಕ್ಷೇತ್ರದ ಶಾಸಕರಿಗೆ ಧನ್ಯವಾದಗಳು.
ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ. ಜಿಲ್ಲೆಯ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಹೀಗೆಯೇ ಮುಂದುವರಿಯಲಿ. ಚುನಾವಣೆಯಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ತಿಳಿಸಿದರು.