ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ನಿರೀಕ್ಷೆಗು ಮೀರಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಯಶಸ್ವಿಯಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮದ ಹೆಸರಲ್ಲಿ ಮತ ಕೇಳಿದ ನರೇಂದ್ರ ಮೋದಿಯವರಿಗೆ ಪ್ರಧಾನಿಯಾಗಲು ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಗ್ರಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನೀರೀಕ್ಷೆಯಂತೆ ರಾಜ್ಯದಲ್ಲಿ ಹೆಚ್ಚು ಸೀಟ್ ಗೆಲ್ಲಲು ಆಗಲಿಲ್ಲ. ಪ್ರಧಾನಿ ಮೋದಿಗೆ ಸೋಲುವ ಭೀತಿ ಇತ್ತು.ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡುತ್ತಾರೆ ಎಂದು ಹೇಳಿದರು.ಆದರೆ ಚುನಾವಣೆಯಲ್ಲಿ ಇದು ಯಾವುದು ವರ್ಕ್ ಔಟ್ ಆಗಲಿಲ್ಲ. ಬಿಜೆಪಿಗೆ ಕಳೆದ ಬಾರಿಗಿಂತ ಸೀಟ್ ಕಡಿಮೆಯಾಗಿದೆ.ಪ್ರಧಾನಿಯಾಗಲು ನರೇಂದ್ರ ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದರು.
ಸಿಎಂಗಳನ್ನು ಜೈಲಿಗೆ ಕಳುಹಿಸಿದರು ಈಡಿ ಸಿಬಿಐ ಬಳಸಿದರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅತಿ ದೊಡ್ಡ ಹಿನ್ನಡೆಯಾಗಿದೆ ಜೋಡೋ ಯಾತ್ರೆ ನ್ಯಾಯ ಯಾತ್ರೆಗೆ ಮನ್ನಣೆ ಸಿಕ್ಕಿದೆ ರಾಹುಲ್ ಯಾದರಿಗಳಿಂದಲೇ ಹೆಚ್ಚು ಮೈತ್ರಿ ಅಭ್ಯರ್ಥಿಗಳ ಜಯವಾಗಿದೆ ಎರಡು ಕ್ಷೇತ್ರದಲ್ಲಿ ಗೆದ್ದ ರಾಹುಲ್ ಗಾಂಧಿಗೆ ಅಭಿನಂದನೆ ಪ್ರಜಾಪ್ರಭುತ್ವ ಸಂವಿಧಾನ ಉಳಿಸಲು ಜನ ಮತ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಮತ ಪ್ರಮಾಣವು ಹೆಚ್ಚಾಗಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ. ಮೇಲ್ನೋಟಕ್ಕೆ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಿವೆ. ಕರ್ನಾಟಕ ಹಾಗೂ ದೇಶದ ಮತದಾರರಿಗೆ ಧನ್ಯವಾದ ಎಂದು ತಿಳಿಸಿದರು.ರಾಜ್ಯದಲ್ಲಿ ಮತದಾನ ಎಣಿಕೆ ವೇಳೆ ಅಹಿತಕರ ಘಟನೆ ನಡೆದಿಲ್ಲ. ಹೀಗಾಗಿ ರಾಜ್ಯದ ಜನತೆಗೆ ಕೂಡ ಧನ್ಯವಾದಗಳು ಎಂದರು.