ಕ್ಕಬಳ್ಳಾಪುರ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ಮನೆಯ ಮೇಲೆ ಇದೀಗ ಕಲ್ಲುತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೆಡಿಗಳು ಕಲ್ಲು ತೂರಾಟ ನಡೆಸಿದ್ದು, ಮನೆಯ ಕಿಟಕಿ, ಗಾಜು ಒಡೆದು ಪುಡಿ ಪುಡಿ ಮಾಡಿದ್ದಾರೆ. ಚುನಾವಣೆಯಲ್ಲಿ ಡಾ. ಸುಧಾಕರ್ ಗೆ ಗೆಲುವು ಸಿಕ್ಕ ಹಿನ್ನೆಲೆಯಲ್ಲಿ ಇದೀಗ ಕಲ್ಲು ತೂರಾಟ ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ. ತಕ್ಷಣ ಚಿಕ್ಕಬಳ್ಳಾಪುರ ನಗರ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಅದು ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಹಾಗಾಗಿ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಶಾಸಕ ಪ್ರದೀಪ ಈಶ್ವರ ಮನೆಯ ಮೇಲೆ ಕಲ್ಲುತೂರಾಟ ನಟಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗುತ್ತಿದೆ. ಘಟನೆ ನಡೆದ ತಕ್ಷಣ ಚಿಕ್ಕಬಳ್ಳಾಪುರ ನಗರ ಠಾಣೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.