ಬೆಂಗಳೂರು : 2019ರಲ್ಲಿ ಪುತ್ರ ನಿಖಿಲ್ ಸೋಲಿಗೆ ಇದೀಗ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಜಯ ಗಳಿಸಿ ಕಾಂಗ್ರೆಸ್ಗೆ ಸೆಡ್ಡು ಹೊಡೆದು, ಇದೀಗ ರಾಜ್ಯ ರಾಜ್ಯ ಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಧುಮುಕಿದ್ದಾರೆ.
ಹೌದು ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗಳಿಸಿದ್ದಾರೆ. ಹಾಗಾಗಿ ಬೆಳಗ್ಗೆ 10 ಗಂಟೆಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿರಲಿದ್ದಾರೆ. ನೆನ್ನೆ ಎಚ್ ಡಿ ಕುಮಾರಸ್ವಾಮಿ ಅವರ ಗೆಲವು ಖಚಿತವಾಗುತ್ತಿದ್ದಂತೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕುಮಾರಸ್ವಾಮಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.
ಇದೀಗ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಲಗ್ಗೆ ಇಟ್ಟಿದ್ದು, 2019 ರಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಎಚ್ಡಿಕೆ 2019 ರಲ್ಲಿ ಮಂಡ್ಯದಲ್ಲಿ ಜೆಡಿಎಸ್ ನ 8 ಶಾಸಕರಿದ್ದರು, ಸೋತಿದ್ದರು. ಇದೀಗ ಮಂಡ್ಯದಲ್ಲಿ ಕಾಂಗ್ರೆಸ್ನ 7 ಶಾಸಕರಿದ್ದರು ಗೆದ್ದು ಬೀಗಿದ ಹೆಚ್ ಡಿ ಕೆ ಅತಿ ಹೆಚ್ಚು ಅಂತರದಲ್ಲಿ ಗೆದ್ದು ದಳಪತಿ ಕಾಂಗ್ರೆಸ್ಗೆ ಸೆಡ್ಡು ಹೊಡೆಡಿದ್ದಾರೆ.