ಬೆಳಗಾವಿ : ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳುವ ಮುನ್ನ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕೋಡಿಯ ನಿಪ್ಪಾಣಿ – ಮುದೋಳ ರಾಜ್ಯ ಹೆದ್ದಾರಿ ಪಕ್ಕದಲ್ಲಿನ ಮತ ಎಣಿಕೆ ಕೇಂದ್ರದ ಬಳಿ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಜಮೀರ್ ಸಿಕಂದರ್ ನಾಯಿಕವಾಡಿ (25) ಎಂದು ಹೇಳಲಾಗುತ್ತಿದೆ. ಆರೋಪಿ ಜಮೀರ್ ಮತ ಎಣಿಕೆ ನಡೆಯುತ್ತಿದ್ದ ಆರ್.ಡಿ.ಕಾಲೇಜಿನ ಎದುರಿನಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತಡರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.
ಪಾಕಿಸ್ತಾನ್ ಕಿ ಜೈ’ ಅಂತಾ ಘೋಷಣೆ ಕೂಗಿದ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಲಂ 295 (ಎ), 505(2) ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.