ಬೆಂಗಳೂರು : ಉತ್ತರಾಖಂಡದ ಸಹಸ್ತ್ರತಾಲ್ಗೆ ಟ್ರೆಕ್ಕಿಂಗ್ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆಯಾಗಿದ್ದಾರೆ.ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಹೌದು ಉತ್ತರಾಖಂಡದ ಸಹಸ್ತ್ರತಾಲ್ಗೆ ಟ್ರೆಕ್ಕಿಂಗ್ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆಯಾಗಿದ್ದಾರೆ ಅದರ ಜೊತೆಗೆ ಮಹಾರಾಷ್ಟ್ರದ ಒಬ್ಬರು ಮತ್ತು ಮೂವರು ಸ್ಥಳೀಯ ಮಾರ್ಗದರ್ಶಕರನ್ನು ಒಳಗೊಂಡ ಚಾರಣ ತಂಡವು ಮೇ 29 ರಂದು ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್ ಯಾತ್ರೆಗೆ ತೆರಳಿದ್ದು, ಜೂನ್ 7 ರಂದು ಹಿಂತಿರುಗಬೇಕು ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್ ತಿಳಿಸಿದ್ದಾರೆ.
ಆದರೆ, ಪ್ರತಿಕೂಲ ಹವಾಮಾನದಿಂದಾಗಿ ತಂಡವು ದಾರಿ ತಪ್ಪಿದೆ ಮತ್ತು ಟ್ರೆಕ್ಕಿಂಗ್ ಏಜೆನ್ಸಿ, ಹಿಮಾಲಯನ್ ವ್ಯೂ ಟ್ರ್ಯಾಕಿಂಗ್ ಏಜೆನ್ಸಿ, ನಾಲ್ವರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದರು ಮತ್ತು 13 ಮಂದಿಯನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದರು.
ಈ ಕುರಿತಂತೆ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದ ಸಹಸ್ತ್ರತಾಲ್ಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿದೆ. ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ. ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲು ಮತ್ತು ಚಾರಣಿಗರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಗೆ ಬಿಶ್ತ್ ವಿನಂತಿಸಿದರು. ಸ್ಥಳೀಯ ಮಟ್ಟದ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸುವಂತೆಯೂ ಅವರು ಆದೇಶಿಸಿದರು. ಸಹಸ್ತ್ರ ತಾಲ್ ಸುಮಾರು 4,100-4,400 ಮೀಟರ್ ಎತ್ತರದಲ್ಲಿದೆ ಮತ್ತು ಘಟನೆಯ ಸ್ಥಳವು ಉತ್ತರಕಾಶಿ ಮತ್ತು ತೆಹ್ರಿ ಜಿಲ್ಲೆಗಳ ಗಡಿ ಪ್ರದೇಶದಲ್ಲಿದೆ ಎಂದು ಅವರು ಹೇಳಿದರು.








