ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024-25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ, ಪ್ರೌಢಶಾಲೆಗಳಿಗೆ 10 ಸಾವಿರ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು-35000. ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-01ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ.
ಉಲ್ಲೇಖ-01 ರಲ್ಲಿ ಒಟ್ಟು-35000. ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ (ಪಿ.ಎಸ್.ಟಿ ಮತ್ತು ಜಿ.ಪಿ.ಟಿ) ಒಟ್ಟು-33863. ಹುದ್ದೆಗಳಿಗೆ ಎದುರಾಗಿ ಮೊದಲ ಹಂತದಲ್ಲಿ ಸದರಿ 33863. ಖಾಲಿ ಹುದ್ದೆಗಳಿಗೆ ಜಿಲ್ಲಾವಾರು/ ತಾಲ್ಲೂಕುವಾರು ಅಥಿತಿ ಶಿಕ್ಷಕರನ್ನು ಉಲ್ಲೇಖ-02 & 03 ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೊಳಪಟ್ಟು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ.
ಅದರಂತೆ, ಕೆಳಕಂಡ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಸೂಚಿಸಿ ತಾಲ್ಲೂಕುವಾರು & ಜಿಲ್ಲಾವಾರು ಹಂಚಿಕೆ ಮಾಡಿದ ಅಥಿತಿ ಶಿಕ್ಷಕರ ವಿವರದ ಅನುಬಂಧ ಅಡಕಗೊಳಿಸಿದೆ.
ಷರತ್ತುಗಳು:-
1. ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದು.
2. ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿ ಸಂಬಂಧಪಟ್ಟ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.
3. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ . ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗೆಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.
4. ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿ ವಿಶೇಷವಾಗಿ ಪ್ರಾರಂಭಿಸಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ ಶಾಲೆಗಳು/ ದ್ವಿಭಾಷಾ (Bilingual) (ಆಂಗ್ಲಭಾಷಾ) ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇಕಡ 100 ರು ಅತಿಥಿ ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು.
5. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡತಕ್ಕದ್ದು.
6. ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡುವುದು.
7. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ 10000/- ಆಗಿರುತ್ತದೆ.
8. ಅಥಿತಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗಳಿಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂತಹ ಅಥಿತಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ತದನಂತರ ತಾಲ್ಲೂಕಿನಲ್ಲಿ ಅಗತ್ಯಾನುಸಾರ ವರ್ಗಾವಣೆಯಿಂದ ಅಥವಾ ಇತರೆ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು/ ಹುದ್ದೆಯನ್ನು ಸ್ಥಳೀಯವಾಗಿ ಹಂಚಿಕೆ ಮಾಡಿ ಕ್ರಮವಹಿಸುವುದು.
9. ಪ್ರಸ್ತುತ ವರ್ಗಾವಣೆ ತಂತ್ರಾಂಶದಲ್ಲಿ ಇದ್ಯಂತೆ ಖಾಲಿಹುದ್ದೆಗಳ ಅನುಸಾರ ತಾಲ್ಲೂಕುವಾರು ಅಥಿತಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು ಸದರಿ ಅಥಿತಿ ಶಿಕ್ಷಕರ ಹುದ್ದೆಗಳನ್ನು ತಾಲ್ಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿರವ ಈ ಕಛೇರಿಗೆ ಸಲ್ಲಿಸಿದ ನಂತರ ತಾಲ್ಲೂಕಿನಿಂದ ತಾಲ್ಲೂಕಿಗೆ (ಜಿಲ್ಲೆಯ ಒಳಗೆ) ಅಥಿತಿ ಶಿಕ್ಷಕರ ಮರುಹಂಚಿಕೆ ಮಾಡುವಂತಿಲ್ಲ.
ಮೇಲ್ಕಂಡ ಎಲ್ಲಾ ಪರತ್ತುಗಳನ್ನು ಪಾರದರ್ಶಕವಾಗಿ ಬಾಚು ತಪ್ಪದೇ ಪಾಲಿಸಲು ಸಂಬಂಧಪಟ್ಟ ಶಿಕ್ಷಕರುಗಳಿಗೆ ಕೇಖ್ಯಾಯವಾಗಿ ಸೂಕ್ತ ಸೂಚನೆಗಳನ್ನು ಜಿಲ್ಲಾ ಉಪನಿರ್ದೇಶಕರು/ಕ್ಷೇಪ ولها تلكة ಶಿಕ್ಷಣಾಧಿಕಾರಿಗಳು ನೀಡುವುದು ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಯಾವುದೇ ಲೋಪದೋಷಗಳಾದಲ್ಲಿ ಸಂಬಂಧವು ತಾಲ್ಲೂಕು/ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮಕ್ಕೆ
ತಕ್ಷಣದಿಂದಲೇ ನೇಮಕ ಮಾಡಿಕೊಳ್ಳಲು ಸಹಾಯವಾಗುವಂತೆ ಕ್ಷೇತ ಶಿಕ್ಷಣಾಧಿಕಾರಿಗಳು, ಅಗತ್ಯತೆ ಅವಶ್ಯಂತ ಜರುವ ಶಾಲೆಗಳ ಖಾಲಿ ಯದ್ದೆಗಳಿಗೆ ನಿಯಮಾನುಸಾರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳು ತಾಲರು ನಂತದಲ್ಲಿ ಶಾಲಾವಾರು ಯದ್ಧ ಹಂಚಿಕೆ ಆದೇಶವನ್ನು ಕಡ್ಡಾಯವಾಗಿ
ನೇಮಕಗೊಂಡ ಶಾಲ್ಲೂಕು ಅತಿಥಿ ಶಿಕ್ಷಕರ ವಿವರಗಳನ್ನು ಕೆಳಕಂಡ ನಿಗದಿತ ನಮೂನೆಯಲ್ಲಿ ಜೀಇವಾಗು ಗಂಡೀಕರಿಸಿ ಈ ಕಛೇರಿಗೆ ಜಿಲ್ಲಾ ಉಪನಿರ್ದೇಶಕರು ವಿಳಂಬಕ್ಕೆ ಅವಕಾಶ ನೀಡದೇ ದಿನಾಂಕ: 15.06.2004 deಳಗೆ ಅಧಿತಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ವಿವರವನ್ನು ತಾಲ್ಲೂಕು ಪಂಚಾಯಿತಿವಾರು ಮುದ್ದೆಗಳ ವಿವರವನ್ನು ಕೆಳಗಿನ ನಮೂನೆಯಲ್ಲಿ ಕ್ರೋಡೀಕರಿಸಿ ದೃಡೀಕೃತ (ಪಿ.ಡಿ.ಎಫ್ ಮಾದರಿಯಲ್ಲಿ) ಸಾಫ್ಟ್ ವತಿಯನ್ನು ಈ ಕಛೇರಿy ಇ -ಮೇಲ್ ವಿಳಾಸ, primarydpi@gmail.com ಮುಖಾಂತರ ಸಲ್ಲಿಸುವುದು. ತಪ್ಪಿದಲ್ಲಿ ಸೂಕ್ತ ಶಿಸ್ತಕ್ರಮ ಜರುಗಿಸಲಾಗುವುದು.
ಪ್ರೌಢಶಾಲೆಗಳಿಗೆ 10 ಸಾವಿರ ಅಥಿತಿ ಶಿಕ್ಷಕರ ನೇಮಕಾತಿ
ಮೇಲ್ಕಂಡ ವಿಷಯ ಹಾಗೂ ಉಲ್ಲೇಖ (1) ರನ್ವಯ 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 10000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ.
ಅದರಂತೆ 2024-25ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 8954 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 8954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿದೆ.
ಷರತ್ತುಗಳು:-
1. ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
2. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.
3. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ
ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.
4. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ. ನಂತರ ಇತರೆ ವಿಷಯಗಳಿಗೆ ಆದ್ಯತೆ ನೀಡುವುದು.
. ಸದರಿ ವಿಷಯಗಳಿಗೆ ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ. 5
6. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು
ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ.
ತಾಲ್ಲೂಕಿನಲ್ಲಿ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.
7. ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.
8. ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಾವಶ್ಯಕ ಖಾಲಿ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಿಸುವುದು.
9. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡತಕ್ಕದ್ದು.