Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳ ʻಕಲಿಕೆʼ ಉತ್ತಮಪಡಿಸಲು ಮಹತ್ವದ ಕ್ರಮ : ಶಿಕ್ಷಕರಿಗೆ ರಾಜ್ಯ ಸರ್ಕಾರ ನೀಡಿದೆ ಈ ಸೂಚನೆ
KARNATAKA

BIG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳ ʻಕಲಿಕೆʼ ಉತ್ತಮಪಡಿಸಲು ಮಹತ್ವದ ಕ್ರಮ : ಶಿಕ್ಷಕರಿಗೆ ರಾಜ್ಯ ಸರ್ಕಾರ ನೀಡಿದೆ ಈ ಸೂಚನೆ

By kannadanewsnow5705/06/2024 5:22 PM

ಬೆಂಗಳೂರು : ಕಲಿಕಾ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಮಕ್ಕಳ ಕಲಿಕೆಯನ್ನು ಉತ್ತಮಪಡಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಈ ಸಂಬಂಧ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕಲಿಕಾ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಮಕ್ಕಳ ಕಲಿಕೆಯನ್ನು ಉತ್ತಮಪಡಿಸುವುದು ಎಲ್ಲಾ ಅನುಷ್ಠಾನಾಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಸಾಧನಾ ಪರೀಕ್ಷೆ, ವಾರ್ಷಿಕ ಪರೀಕ್ಷೆಗಳಲ್ಲಿನ ವಿದ್ಯಾರ್ಥಿಗಳ ಸಾಧನೆಯು ನಾವು ನೀಡುವ ಶೈಕ್ಷಣಿಕ ಬೆಂಬಲದ ಕೈಗನ್ನಡಿಯಾಗಿರುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಬೆಂಬಲವು ನಮ್ಮೆಲ್ಲರ ಕಾರ್ಯ ನಿರ್ವಹಣೆಯನ್ನು ಬಿಂಬಿಸುತ್ತದೆ.

ವಿದ್ಯಾರ್ಥಿಗಳ ಕಲಿಕೆಯನ್ನು ಉತ್ತಮಪಡಿಸಲು ಶಿಕ್ಷಕರನ್ನು ಪ್ರೇರಣೆಗೊಳಿಸುವ ಹಾಗೂ ಅಗತ್ಯ ಬೆಂಬಲವನ್ನು ಶಾಲಾ ಹಂತದಿಂದ ರಾಜ್ಯ ಹಂತದವರೆಗೆ ನೀಡುವ ಕಾರ್ಯವು ಚಾಲ್ತಿಯಲ್ಲಿದೆ. ಬ್ಲಾಕ್, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಹಂತದಲ್ಲಿ ಕ್ರಿಯಾ ಯೋಜನೆಯೊಂದಿಗೆ ಅನುಷ್ಠಾನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ತರಗತಿಗಳನ್ನು ನಿರ್ವಹಣೆಯ ಬಗ್ಗೆ ಶಿಕ್ಷಕರಿಗೆ ಎಲ್ಲಾ ಹಂತಗಳಲ್ಲೂ ಬೋಧನಾಶಾಸ್ತ್ರ (Pedagogy) ಸಂಬಂಧಿತ ಅಂಶಗಳಲ್ಲಿ ಜ್ಞಾನವನ್ನು ರೂಪಿಸುವ ತರಬೇತಿ (ಸಚೇತನ ಹಾಗೂ ಶಾಲಾ ಬೆಂಬಲ ವ್ಯವಸ್ಥೆ) ಗಳನ್ನು ರಾಜ್ಯ ಹಂತದಲ್ಲಿ ರೂಪಿಸಿ, ಡಯಟ್ ನ ಬೋಧಕ ಸಿಬ್ಬಂದಿ ಹಾಗೂ ವಿಷಯ ಪರಿವೀಕ್ಷಕರುಗಳಿಗೆ ಈಗಾಗಲೇ ನೀಡಲಾಗಿದೆ. ಅವರುಗಳ ಮೂಲಕ ಜಿಲ್ಲಾ ಹಂತ ಹಾಗೂ ಬ್ಲಾಕ್ ಹಂತದ ಅನುಷ್ಠಾನಾಧಿಕಾರಿಗಳು ಮತ್ತು ಶಿಕ್ಷಕರನ್ನು ತಲುಪುವ ಪ್ರಯತ್ನಗಳನ್ನು ನಿರಂತರವಾಗಿ ಮಾಡಲಾಗುತ್ತಿದೆ.

ಪ್ರತಿ ತಿಂಗಳು ನಡೆಸುವ ಡಯಟ್ ಪ್ರಾಂಶುಪಾಲರುಗಳ ಮಾಸಿಕ ಸಭೆಯಲ್ಲಿಯೂ ಪ್ರಥಮ ಆದ್ಯತೆಯಾಗಿ ಶೈಕ್ಷಣಿಕ ಅಂಶಗಳನ್ನು ಚರ್ಚಿಸಲಾಗುತ್ತಿದೆ. ಈ ವಿಷಯಗಳನ್ನು ಆನ್‌ಲೈನ್ ಮೂಲಕ ಎಲ್ಲಾ ಡಯಟ್ ಉಪನ್ಯಾಸಕರುಗಳಿಗೂ ಮನವರಿಕೆ ಮಾಡಿಕೊಡುವ ಪ್ರಯತ್ನಗಳು ಡಿ.ಎಸ್.ಇ.ಆ‌ರ್.ಟಿ.ಯಿಂದ ನಿರಂತರವಾಗಿ ನಡೆಯುತ್ತಿವೆ. ಉತ್‌ತಮ ಶೈಕ್ಷಣಿಕ ಅಭ್ಯಾಸಗಳನ್ನು ರೂಪಿಸಿ ರೂಢಿಸಿಕೊಂಡಿರುವ ಡಯಟ್‌ ಗಳಿಂದಲೂ ಮಾಹಿತಿ ವಿನಿಮಯ ಮಾಡಿಕೊಳ್ಳಲು ಪ್ರಾಂಶುಪಾಲರ ಸಭೆಗಳ ಮೂಲಕ ಅವಕಾಶ ಮಾಡಿಕೊಟ್ಟಿರುವುದು ತಮ್ಮೆಲ್ಲರಿಗೂ ತಿಳಿದಿದೆ.

ಮೇಲೆ ಪ್ರಸ್ತಾಪಿಸಿರುವ ಅಂಶಗಳನ್ನು ಆಧರಿಸಿ ಶಾಲಾ ಬೆಂಬಲ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಲು ಡಿ.ಎಸ್.ಇ.ಆರ್.ಟಿ. ವತಿಯಿಂದ ರಾಜ್ಯ ಹಂತದಲ್ಲಿ ಪ್ರತಿ ಡಯಟ್ ನ ಇಬ್ಬರು ಅಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳು / ವಿಷಯ ಪರಿವೀಕ್ಷಕರಿಗೆ “ಶಾಲಾಧಾರಿತ ತರಬೇತಿ, ಶಾಲಾ ಭೇಟಿ ಮತ್ತು ಬೆಂಬಲ ವ್ಯವಸ್ಥೆ” ಯ ಬಗ್ಗೆ 03 ದಿನಗಳ ತರಬೇತಿಯನ್ನು ದಿನಾಂಕ:22/05/2024 ರಿಂದ 24/05/2024 ರ ವರೆಗೆ ಆಯೋಜಿಸಲಾಗಿರುತ್ತದೆ. ಈ ತರಬೇತಿಯ ಮೂಲ ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಇವರುಗಳು ಜಂಟಿಯಾಗಿ 2024-25ನೇ ಶೈಕ್ಷಣಿಕ ಸಾಲಿಗೆ ತಮ್ಮ ಜಿಲ್ಲೆಯ “ಶಾಲಾಧಾರಿತ ತರಬೇತಿ, ಶಾಲಾ ಭೇಟಿ ಮತ್ತು ಬೆಂಬಲ ವ್ಯವಸ್ಥೆ” ಯ ಕುರಿತು ಶೈಕ್ಷಣಿಕ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕಾಗಿದೆ.

BIG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳ ʻಕಲಿಕೆʼ ಉತ್ತಮಪಡಿಸಲು ಮಹತ್ವದ ಕ್ರಮ : ಶಿಕ್ಷಕರಿಗೆ ರಾಜ್ಯ ಸರ್ಕಾರ ನೀಡಿದೆ ಈ ಸೂಚನೆ BIG NEWS: A major step to improve the 'learning' of school students in the state: The state government has issued instructions to teachers
Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.