ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಬೆಂಗಳೂರಿನಲ್ಲಿ ಸಂಜೆಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವಡೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಬೆಂಗಳೂರಿನ ಹೆಬ್ಬಗೋಡಿ, ಚಂದಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು, ಕೆಲಸಗಳಿಂದ ಮನೆಗೆ ವಾಪಸ್ ಆಗುವ ವಾಹನ ಸವಾರರು ಪರದಾಡುವಂತಾಗಿದೆ.
ನಗರದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಆಗುತ್ತಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ, ಮಾಕಳಿ, ಮಾಚೋಹಳ್ಳಿ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಚಾಲುಕ್ಯ ಸರ್ಕಲ್, ವಿಧಾನಸೌಧ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ.