ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ ಮಾತನಾಡುವ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೋರ್ಟ್ ಹಾಜರಾಗಿದ್ದರು. ಬಳಿಕ ಜಾಮೀನು ಪಡೆದಿದ್ದು, ಇದೀಗ ರಾಹುಲ್ ಗಾಂಧಿ ಅವರು ನಾಳೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರಾಗಲಿದ್ದಾರೆ.
ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ-2023 ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ರವರುಗಳು ರಾಜ್ಯದಲ್ಲಿ ಬಿಜೆಪಿ ಸರ್ಕಾರವು 2019 ರಿಂದ 2023 ರವರೆಗೆ ಭ್ರಷ್ಟ ಆಡಳಿತವನ್ನು ನೀಡಿರುತ್ತದೆ. ಅಂದರೆ ಸಿ.ಎಂ. ಹುದ್ದೆ- ರೂ.2500 ಕೋಟಿ, ಮಂತ್ರಿಗಳ ಹುದ್ದೆ- ರೂ. 500 ಕೋಟಿ ರೂಗಳನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿ ಹುದ್ದೆ ಸ್ವೀಕಾರ ಮಾಡಿರುತ್ತಾರೆ. ಭ್ರಷ್ಟಾಚಾರ ಅಡಳಿತವನ್ನು ನೀಡಿರುತ್ತಾರೆ ಎಂದು ಆರೋಪಿಸಿದ್ದರು.ಈ ಹಿನ್ನೆಲೆ ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.