ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಕ್ರಮ ಹಣ ವರ್ಗಾವಣೆ ಕುರಿತು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ರಮೇಶ್ ಎನ್ ಆರ್ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ 187 ಕೋಟಿ ರೂ.ಗೂ ಅಧಿಕ ಅವ್ಯವಹಾರದ ನಡೆದಿದ್ದು, ಜಾರಿನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಮ್ಯದ “ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ”ದಲ್ಲಿ 187 ಕೋಟಿ ರೂ.ಗಿಂತ ಹೆಚ್ಚಿನ ಅಕ್ರಮ / ದುರುಪಯೋಗವಾಗಿದೆ. 26/05/2024 ರಂದು ಸದರಿ ನಿಗಮದಲ್ಲಿ ಅಕೌಂಟ್ಸ್ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಶ್ರೀ ಚಂದ್ರಶೇಖರನ್ ಪಿ ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್ ಅವರ ಹೆಸರನ್ನು ಚಂದ್ರಶೇಖರನ್ ಪಿ ತಮ್ಮ ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಎಂ.ಜಿ.ರಸ್ತೆ ಶಾಖೆಯ ಲೆಕ್ಕಾಧಿಕಾರಿ ಪರಶುರಾಮ ಜಿ.ದುರಗಣ್ಣವರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತಾ ಮತ್ತಿತರರು ಉಪಸ್ಥಿತರಿದ್ದರು ನಿಗಮ ಮತ್ತು ಸಂಬಂಧಪಟ್ಟ ಸಚಿವ ಬಿ.ನಾಗೇಂದ್ರ ಅವರ ಖಾತೆಯಲ್ಲಿ 187 ಕೋಟಿ ರೂಪಾಯಿಗಳ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಯುವಜನ ಸೇವೆ ಮತ್ತು ಕ್ರೀಡೆ ಮತ್ತು ಪರಿಶಿಷ್ಟ ಜಾತಿಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಮತ್ತು ಅವರ ಆಪ್ತ ನಾಗರಾಜ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ದಿವಂಗತ ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್ ನಲ್ಲಿ ಇದನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿದ್ದಾರೆ.