ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಅವ್ಯವಹಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಭೇಟಿಯಾಗಿ ದೂರು ನೀಡಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಾನು ಸಚಿವ ನಾಗೇಂದ್ರರ ಬಳಿ ರಾಜೀನಾಮೆ ಕೇಳಿಲ್ಲ, ಕರೆದು ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.